ರಾಜ್ಯದಲ್ಲಿ ಮುಂದುವರಿದ ಮಳೆ | ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣಕನ್ನಡ, ಉಡುಪಿ, ಬೀದರ್, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಬೀದರ್, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆಯಾಗಲಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳದಲ್ಲಿ ಮಳೆಯಾಗಲಿದೆ.
ಕ್ಯಾಸಲ್‌ರಾಕ್, ಕಮ್ಮರಡಿ, ಆಗುಂಬೆ, ಲಿಂಗನಮಕ್ಕಿ, ಕದ್ರಾ, ಸಿದ್ದಾಪುರ, ಔರಾದ್, ಗೇರುಸೊಪ್ಪ, ಧರ್ಮಸ್ಥಳ, ಕಳಸ, ಪುತ್ತೂರು, ಮಾಣಿ, ಬೆಳ್ತಂಗಡಿ, ಜಯಪುರ, ಭಾಗಮಂಡಲ, ಕೊಪ್ಪ, ಸೋಮವಾರಪೇಟೆ, ಮಂಗಳೂರು, ಯಲ್ಲಾಪುರ, ಇಂಡಿ, ಸಿಂದಗಿ, ಶೋರಾಪುರ, ಲೋಂಡಾ, ಸೈದಾಪುರ, ಹಾರಂಗಿ, ಕೊಟ್ಟಿಗೆಹಾರ, ತ್ಯಾಗರ್ತಿಯಲ್ಲಿ ಮಳೆಯಾಗಿದೆ.
ಉಪ್ಪಿನಂಗಡಿ, ಅಂಕೋಲಾ, ಕಾರ್ಕಳ, ಕುಶಾಲನಗರ, ಬನವಾಸಿ, ಶಿರಾಲಿ, ಮುಲ್ಕಿ, ದೇವದುರ್ಗ, ಹಿರೇಕೆರೂರು, ಮಂಠಾಳ, ರಾಮನಗರ, ಹಗರಿಬೊಮ್ಮನಹಳ್ಳಿ, ಕುಣಿಗಲ್, ಪೊನ್ನಂಪೇಟೆ, ಮೂಡಿಗೆರೆ, ಎನ್ಆರ್‌ಪುರ, ಚಾಮರಾಜನಗರ, ಶೃಂಗೇರಿಯಲ್ಲಿ ಮಳೆಯಾಗಿದೆ.