Was a convention needed to promote zero achievement?: Question from the deceitful Narayana Swamy
x

ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ

ಶೂನ್ಯ ಸಾಧನೆ ಪ್ರಚಾರಕ್ಕೆ ಸಮಾವೇಶ ಬೇಕಿತ್ತೇ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಅಭಿವೃದ್ಧಿ ಕಾಮಗಾರಿ ನಡೆಯದೆ ಶಾಸಕರು ಕ್ಷೇತ್ರಗಳಿಗೆ ಹೋಗಲಾಗುತ್ತಿಲ್ಲ ಎಂದು ಆರೋಪಿಸಿದ ಬಳಿಕವೂ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ.


ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದು ಕಾಂಗ್ರೆಸ್‌ ಶಾಸಕರೇ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದಾರೆ. ಇಷ್ಟೆಲ್ಲಾ ಇರುವಾಗ ಶೂನ್ಯ ಸಾಧನೆಯ ಪ್ರಚಾರಕ್ಕಾಗಿ ಸಾಧನಾ ಸಮಾವೇಶ ಮಾಡುವ ಅಗತ್ಯವಿತ್ತೇ ಎಂದು ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕಾಮಗಾರಿಗಳು ನಡೆಯದೆ ಶಾಸಕರು ತಾವು ಕ್ಷೇತ್ರಗಳಿಗೆ ಹೋಗಲು ಆಗುತ್ತಿಲ್ಲ. ಕೇವಲ ಕಾಂಗ್ರೆಸ್ ಶಾಸಕರಿಗೆ ಮಾತ್ರ ತಲಾ 50 ಕೋಟಿ ರೂ. ಅನುದಾನ ನೀಡಿ ಬೇರೆ ಪಕ್ಷದ ಶಾಸಕರಿಗೆ ಅನುದಾನ ನೀಡದೇ ರಾಜಕೀಯ ಮಾಡಿದ್ದಾರೆ. ಪ್ರತಿಪಕ್ಷಗಳ ಶಾಸಕರು ಕರ್ನಾಟಕದವರಲ್ಲವೇ ಎಂದು ಪ್ರಶ್ನಿಸಿದರು.

ವಿಪಕ್ಷ ಶಾಸಕರ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮಾಡಲು ಸರ್ಕಾರ ಅನುದಾನ ನೀಡಬೇಕು. ಸಿದ್ದರಾಮಯ್ಯ ಕೇವಲ ಸ್ವಪಕ್ಷೀಯ ಶಾಸಕರ ವಿಧಾನಸಭೆಗಳಿಗೆ ಮಾತ್ರ ಮುಖ್ಯಮಂತ್ರಿಯಲ್ಲ. ಅವರು ಇಡೀ ರಾಜ್ಯಕ್ಕೆ ಸಿಎಂ ಎಂದು ತಿಳಿಯಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರ ಸಲಹೆಯಲ್ಲಿ ಯಾವುದೇ ತಪ್ಪಿಲ್ಲ. ನಿಮಗೆ ದಲಿತರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲು ಇಷ್ಟವಿಲ್ಲದಿದ್ದರೆ, ಸಿಎಂ ಸಿದ್ದರಾಮಯ್ಯನವರ ಹೆಸರನ್ನೇ ಘೋಷಿಸಲಿ ಎಂದು ತಿಳಿಸಿದರು.

ಕಾಂಗ್ರೆಸ್‌ಗೆ ದಲಿತರು ಕೇವಲ ಮತಬ್ಯಾಂಕ್. ಅವರನ್ನು ಕಾಂಗ್ರೆಸ್ ಗುಲಾಮರೆಂದು ತಿಳಿದಿದೆ. ಹಿಂದುಳಿದ ವರ್ಗಗಳ ಚಾಂಪಿಯನ್ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲೇ ಒಬಿಸಿ ಸಮಿತಿ ರಚನೆ ಮಾಡಿದ್ದಾರೆ. ನಿಮ್ಮನ್ನೇ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಲಿ ಎಂದು ಒತ್ತಾಯಿಸಿದರು.

Read More
Next Story