ತರ್ತು ಪರಿಸ್ಥಿತಿ ಮನಸ್ಸಿನ ಕಾಂಗ್ರೆಸ್: ಸಿ.ಟಿ.‌ರವಿ ಟೀಕೆ
x

ತರ್ತು ಪರಿಸ್ಥಿತಿ ಮನಸ್ಸಿನ ಕಾಂಗ್ರೆಸ್: ಸಿ.ಟಿ.‌ರವಿ ಟೀಕೆ


Click the Play button to hear this message in audio format

ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷವು ತಾನು ಮಾಡಿದ ತಪ್ಪಿಗೆ 49 ವರ್ಷಗಳಾದರೂ ಕ್ಷಮೆ ಕೇಳಿಲ್ಲ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಟೀಕಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇಶಕ್ಕೆ ತುರ್ತು ಪರಿಸ್ಥಿತಿ ಹೇರುವ ಇಂಥ ಪರಿಸ್ಥಿತಿ ಯಾವತ್ತೂ ಬರಬಾರದು ಎಂದಿದ್ದರೆ, ಆ ಕರಾಳ ಅಧ್ಯಾಯದ ನೆನಪು ಮಾಡಿಕೊಳ್ಳುವ ಅವಶ್ಯಕತೆ ಇದೆ. ಕಾಂಗ್ರೆಸ್ಸಿಗೆ ತಾವು ಮಾಡಿದ್ದು ತಪ್ಪು ಎಂದು ಅನಿಸಿದರೆ, ಸಾರ್ವಜನಿಕ ಕ್ಷಮೆ ಯಾಚನೆ ಮಾಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಪಕ್ಷದ ಡಿಎನ್‍ಎಯಲ್ಲೇ ವ್ಯಕ್ತಿಗತ ಸ್ವಾರ್ಥಕ್ಕಾಗಿ ಏನನ್ನು ಬೇಕಾದರೂ ಮಾಡುವ ಮನಸ್ಥಿತಿ ಇದೆ. ಈ ಮನಸ್ಥಿತಿ ಪ್ರಜಾಪ್ರಭುತ್ವಕ್ಕೂ ಅಪಾಯಕಾರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷವು ಶ್ರೀಮತಿ ಇಂದಿರಾ ಗಾಂಧಿಯವರ ನೇತೃತ್ವದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಕೆಲಸ ಮಾಡಿತ್ತು. ಅದೊಂದು ಕರಾಳ ದಿನ ಎಂದು ತಿಳಿಸಿದರು.

ಅವತ್ತು ಮಾನ್ಯ ಸಿದ್ದರಾಮಯ್ಯನವರು ಕಾಂಗ್ರೆಸ್ ಜೊತೆಗಿದ್ದರೋ ಇಲ್ಲವೋ ಗೊತ್ತಿಲ್ಲ. ಆದರೆ, ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್ಸಿನ ಜೊತೆಗಿದ್ದರು. ಶ್ರೀಮತಿ ಇಂದಿರಾ ಗಾಂಧಿಯವರು ಡಾ. ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವನ್ನು ದಮನ ಮಾಡಿದ್ದರು ಎಂಬುದು ಖರ್ಗೆಯವರಿಗೆ ಅರ್ಥ ಆಗಬೇಕಿತ್ತು ಎಂದು ತಿಳಿಸಿದರು.

ತನ್ನ ಸ್ವಾರ್ಥಕ್ಕಾಗಿ, ಅಧಿಕಾರದಲ್ಲಿ ಉಳಿಯಬೇಕೆಂಬ ಏಕೈಕ ದುರುದ್ದೇಶದಿಂದ ಅಲಹಾಬಾದ್ ಕೋರ್ಟ್ ತೀರ್ಪಿನ ವಿರುದ್ಧ ಸಂವಿಧಾನವನ್ನೇ ಬುಡಮೇಲು ಮಾಡಿದ್ದರು. ವಿಪಕ್ಷ ನಾಯಕರನ್ನೆಲ್ಲ ಜೈಲಿಗೆ ಅಟ್ಟಿದ್ದಲ್ಲದೆ, ಪತ್ರಿಕಾ ಸ್ವಾತಂತ್ರ್ಯ ಹರಣ ಮಾಡಿದ್ದರು. ಮೂಲಭೂತ ಹಕ್ಕುಗಳ ದಮನ ಮಾಡಿದ್ದರು ಎಂದು ವಿವರಿಸಿದರು

Read More
Next Story