ಜೈಲಿನಲ್ಲಿರುವ ನಟ ದರ್ಶನ್ ಕೋರಿಕೆಯಂತೆ ಟಿವಿ ಅಳವಡಿಕೆ!
x
ನಟ ದರ್ಶನ್‌

ಜೈಲಿನಲ್ಲಿರುವ ನಟ ದರ್ಶನ್ ಕೋರಿಕೆಯಂತೆ ಟಿವಿ ಅಳವಡಿಕೆ!

ನಟ ದರ್ಶನ್ ತೂಗುದೀಪ ಅವರಿಗೆ ಮನವಿಯ ಮೇರೆಗೆ ಅವರ ಸೆಲ್‌ನಲ್ಲಿ ಟಿವಿಯನ್ನು ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Click the Play button to hear this message in audio format

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ನೀಡಲಾದ ರಾಜ್ಯಾತಿಥ್ಯದ ಫೊಟೋಗಳು ವೈರಲ್‌ ಆದ ಬಳಿಕ ನಟನನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿಯ ಸೆಂಟ್ರಲ್‌ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಇದೀಗ ನಟ ದರ್ಶನ್ ತೂಗುದೀಪ್ ಮನವಿಯ ಮೇರೆಗೆ ಆತನ ಸೆಲ್‌ನಲ್ಲಿ ಟಿವಿಯನ್ನು ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಟ ದರ್ಶನ್‌ ಪರಪ್ಪನ ಅಗ್ರಹಾರದ ಜೈಲಿನಲ್ಲಿ ರೌಡಿಶೀಟರ್ ಸೇರಿದಂತೆ ಇತರ ಮೂವರ ಜೊತೆ ಕಾಫಿ ಕುಡಿದು ಸಿಗರೇಟು ಸೇದುತ್ತಿರುವ ಫೋಟೋ ವೈರಲ್‌ ಆಗಿದ್ದು, ಇದು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು.ಬಳಿಕ ಆಗಸ್ಟ್ 29 ರಂದು ನಟನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿಗೆ ಸ್ಥಳಾಂತರಿಸಲಾಯಿತು.

ಜೈಲು ಮಾರ್ಗಸೂಚಿಗಳ ಅಡಿಯಲ್ಲಿ ಟಿವಿಗೆ ಅವಕಾಶವಿದೆ

ಕಳೆದ ವಾರವಷ್ಟೇ ದರ್ಶನ್ ಅವರು ತನ್ನ ವಿರುದ್ಧ ಸಲ್ಲಿಸಲಾಗಿರುವ ಚಾರ್ಚ್ ಶೀಟ್ ನಲ್ಲಿ ಏನಿದೆ ಎಂಬುದನ್ನು ಅರಿಯಲು ಮತ್ತು ಹೊರ ಜಗತ್ತಿನಲ್ಲಿ ಏನು ನಡೆಯುತ್ತದೆ ಎಂಬುದನ್ನು ತಿಳಿಯುವ ಸಲುವಾಗಿ ತನಗೆ ಟಿವಿ ಒದಗಿಸಿಕೊಡುವಂತೆ ಜೈಲಧಿಕಾರಿಗಳು ಮನವಿ ಮಾಡಿದ್ದರು. ಹೀಗಾಗಿ, ಕಾರ್ಯವಿಧಾನ ಮತ್ತು ಜೈಲು ಮಾರ್ಗಸೂಚಿಗಳನ್ನು ಅನುಸರಿಸಿ, ಸೋಮವಾರದ ವೇಳೆಗೆ ದರ್ಶನ್‌ ಶೆಲ್‌ನಲ್ಲಿ ದೂರದರ್ಶನವನ್ನು ಒದಗಿಸಲಾಗುವುದು ಎಂದು ಜೈಲಿನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 17 ಆರೋಪಿಗಳ ವಿರುದ್ಧ ಬೆಂಗಳೂರು ಪೊಲೀಸರು ಬುಧವಾರ 3,991 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣದ ಸಹ ಆರೋಪಿಗಳಾದ ದರ್ಶನ್ ಅವರ ಸ್ನೇಹಿತೆ ಪವಿತ್ರಾ ಗೌಡ ಮತ್ತು ಇತರ 15 ಮಂದಿ ಪ್ರಸ್ತುತ ರಾಜ್ಯದ ವಿವಿಧ ಜೈಲುಗಳಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ನಟರು, ಸಹಾಯಕರ ವಿರುದ್ಧ ಆರೋಪಗಳು

ಚಿತ್ರದುರ್ಗ ಮೂಲದ 33 ವರ್ಷದ ರೇಣುಕಾಸ್ವಾಮಿ ಎಂಬ ವ್ಯಕ್ತಿ ದರ್ಶನ್‌ ಗೆಳತಿ ಪವಿತ್ರಾಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದನು, ಇದು ದರ್ಶನ್ ಅವರನ್ನು ಕೆರಳಿಸಿತು, ಇದು ಅವರ ಕೊಲೆಗೆ ಕಾರಣವಾಯಿತು ಎಂದು ಹೇಳಲಾಗಿದೆ. ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ಭಾಗವಾಗಿರುವ ಆರೋಪಿಗಳಲ್ಲಿ ಒಬ್ಬನಾದ ರಾಘವೇಂದ್ರ, ರೇಣುಕಾಸ್ವಾಮಿಯನ್ನು ಬೆಂಗಳೂರಿನ ಆರ್‌ಆರ್ ನಗರದ ಶೆಡ್‌ಗೆ ಕರೆತಂದಿದ್ದ. ಇದೇ ಶೆಡ್‌ನಲ್ಲಿಯೇ ಆತನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರು ಆಘಾತ ಮತ್ತು ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿ ಹೇಳುತ್ತದೆ.

ನಂಬರ್ ಒನ್ ಆರೋಪಿಯಾಗಿರುವ ಪವಿತ್ರಾ ಗೌಡ ರೇಣುಕಾಸ್ವಾಮಿ ಹತ್ಯೆಗೆ ಪ್ರಮುಖ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಇತರ ಆರೋಪಿಗಳನ್ನು ಪ್ರೇರೇಪಿಸಿ, ಅವರೊಂದಿಗೆ ಸಂಚು ರೂಪಿಸಿ, ಅಪರಾಧದಲ್ಲಿ ಭಾಗಿಯಾಗಿದ್ದಾಳೆ ಎಂಬುದು ತನಿಖೆಯಿಂದ ಸಾಬೀತಾಗಿದೆ ಎಂದು ಹೇಳಿದ್ದಾರೆ.

Read More
Next Story