Actor Darshan Case | ಬೆಂಗಳೂರು ಪೊಲೀಸ್ ಕಮಿಷನರ್ ಹೇಳಿದ್ದೇನು?
x
ಬೆಂಗಳೂರು ಪೊಲೀಸ್​ ಆಯುಕ್ತ ಬಿ. ದಯಾನಂದ್

Actor Darshan Case | ಬೆಂಗಳೂರು ಪೊಲೀಸ್ ಕಮಿಷನರ್ ಹೇಳಿದ್ದೇನು?

ದರ್ಶನ್‌, ಆತನ ಆಪ್ತೆ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿಯನ್ನು ಪೊಲೀಸರು ಬಂಧಿಸಿ ಎಲ್ಲಾ ಆಯಾಮದಿಂದ ವಿಚಾರಣೆ ನಡೆಸುತ್ತಿದ್ದಾರೆ ಎಂದು ಬೆಂಗಳೂರು ಪೊಲೀಸ್​ ಆಯುಕ್ತ ಬಿ. ದಯಾನಂದ್ ಅವರು ತಿಳಿಸಿದ್ದಾರೆ.


Click the Play button to hear this message in audio format

Actor Darshan Case | ರೇಣುಕಾಸ್ವಾಮಿ ಹತ್ಯೆ ಪ್ರಕಣಕ್ಕೆ ಸಂಬಂಧಿಸಿದಂತೆ ದರ್ಶನ್‌, ಆತನ ಆಪ್ತೆ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿಯನ್ನು ಪೊಲೀಸರು ಬಂಧಿಸಿ ಕೂಲಂಕಷ ವಿಚಾರಣೆ ನಡೆಸುತ್ತಿದ್ದಾರೆ ಎಂದು ಬೆಂಗಳೂರು ಪೊಲೀಸ್​ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಂಗಳವಾರ (ಜೂ.18) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣ ಪೊಲೀಸರು ನಿಷ್ಪಕ್ಷಪಾತ ಧೋರಣೆ, ಸಮಯ ಪ್ರಜ್ಞೆ, ಕರ್ತವ್ಯಪ್ರಜ್ಞೆಯಿಂದ ನಡೆಸಿದ ತನಿಖೆಯಿಂದ ಹಲವು ಮಹತ್ವದ ಸಂಗತಿಗಳು ಹೊರಬಂದಿದೆ. ತನಿಖೆಯನ್ನು ಸರಿಯಾದ ಆಯಾಮಗಳಲ್ಲಿ ನಡೆಸಲಾಗುತ್ತಿದೆ. ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಆದರೆ ತನಿಖೆಯ ವಿವರಗಳನ್ನು ನಾವು ಈಗಲೇ ಹೇಳಲು ಆಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ತನಿಖೆಯ ಪ್ರಕ್ರಿಯೆಗಳು ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿಯನ್ನು ಈಗ ಕೊಡುವುದು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚಿನ ವಿವರ ಹಾಗೂ ಪೂರಕ ಮಾಹಿತಿಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಕರಣ ಗಂಭೀರತೆಯಿಂದ ಕೂಡಿರುವುದರಿಂದ ಎಸಿಪಿಗೆ ತನಿಖಾ ಹೊಣೆ ನೀಡಲಾಗಿದೆ. ಅಗತ್ಯ ಸಿಬ್ಬಂದಿ ಒದಗಿಸಲಾಗಿದೆ. ಬೆಂಗಳೂರು, ಚಿತ್ರದುರ್ಗ ಸೇರಿದಂತೆ ಹಲವು ಕಡೆ ತಂಡಗಳಿಂದ ತನಿಖೆ ನಡೆಯುತ್ತಿದೆ. ಇನ್ಸ್‌ಪೆಕ್ಟರ್‌ ತಂಡದಲ್ಲಿ ತನಿಖೆ ನಡೆಸುತಿದ್ದಾರೆ. ಸಮರ್ಪಕ ಹಾಗೂ ವಿಧಿವಿಜ್ಞಾನ, ತಾಂತ್ರಿಕ, ಕಾನೂನು ಸಲಹೆ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ಬಗ್ಗೆ ಉತ್ತರಿಸಿದ ಅವರು, ಇದೆಲ್ಲ ತನಿಖೆಯ ಭಾಗ, ಅವುಗಳನ್ನು ಹೇಳಲು ಆಗಲ್ಲ ಎಂದರು. ವ್ಯಕ್ತಿ ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸ ಆಗಬೇಕಿದೆ. ಪ್ರಕರಣ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸ ಆಗುತ್ತಿದೆ ಎಂದರು.

ಏನಿದು ಪ್ರಕರಣ

ನಟ ದರ್ಶನ್‌ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್‌ ಮಾಡಿದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ(Renuka Swamy Murder Case) ಎಂಬುವರನ್ನು ಜೂನ್‌ 8ರಂದು ದರ್ಶನ್‌ ಮತ್ತು ಗ್ಯಾಂಗ್‌ ಕಿಡ್ನಾಪ್‌ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಜೂನ್‌ 9ರಂದು ಸುಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಬಳಿಕ ಅದೇ ದಿನ ಪೊಲೀಸರಿಗೆ ದೂರು ನೀಡಲಾಗಿತ್ತು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು. ಇದುವರೆಗೆ ಒಟ್ಟು 17 ಜನರನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Read More
Next Story