Actor Darshan Case | ಮತ್ತೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌
x
ನಟ ದರ್ಶನ್‌ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ಮುಂದೂಡಿದೆ.

Actor Darshan Case | ಮತ್ತೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ ಪಿಪಿ ಪ್ರಸನ್ನ ಕುಮಾರ್‌ ಕೋರ್ಟ್‌ ಬಳಿ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಹೈಕೋರ್ಟ್, ವಿಚಾರಣೆಯನ್ನು ಮಂಗಳವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿತು.


Click the Play button to hear this message in audio format

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರಕ್ಕೆ ಮುಂದೂಡಿಕೆ ಮಾಡಿದೆ.

ನಟ ದರ್ಶನ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆ ಸಿಟಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಸೋಮವಾರ ಹೈಕೋರ್ಟ್‌ ನ ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ನಡೆದಿತು.

ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ಎಸ್‌ ಪಿಪಿ ಪ್ರಸನ್ನ ಕುಮಾರ್‌ ಕೋರ್ಟ್‌ ಮುಂದೆ ಮನವಿ ಮಾಡಿದರು. ಅವರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ವಿಚಾರಣೆಯನ್ನು ಮಂಗಳವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿತು.

ದರ್ಶನ್ ಅವರಿಗೆ ಬೆನ್ನುನೋವು ಹಿನ್ನೆಲೆಯಲ್ಲಿ ಸಿಟಿ ಸ್ಕ್ಯಾನ್, ಎಂಆರ್ ಐ ಸ್ಕ್ಯಾನ್ ಮಾಡಲಾಗಿದೆ. ತಕ್ಷಣ ಸರ್ಜರಿ ಅಗತ್ಯ ಎಂದು ವೈದ್ಯರು ಹೇಳಿದ್ದಾರೆ. ಚಿಕಿತ್ಸೆ ಪಡೆಯದಿದ್ದರೆ ಪ್ಯಾರಲಿಸಿಸ್ ಆಗಬಹುದು ಎಂದೂ ವೈದ್ಯರು ಹೇಳಿರುವುದಾಗಿ ನಟ ದರ್ಶನ್ ಪರ ವಕೀಲ ಸಿ ವಿ ನಾಗೇಶ್ ವಾದ ಮಂಡಿಸಿದರು.

ರೇಣುಕಾಸ್ವಾಮಿ ಕೇಸ್‌ನಲ್ಲಿ ನಟ ದರ್ಶನ್ ಜೈಲು ಸೇರಿ ಬರೋಬ್ಬರಿ 5 ತಿಂಗಳಾಗಿವೆ.

Read More
Next Story