State Govt Employees| ಓಪಿಎಸ್ ಅನುಷ್ಠಾನಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಡಿಸಿಎಂ ಭರವಸೆ
x

State Govt Employees| ಓಪಿಎಸ್ ಅನುಷ್ಠಾನಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಡಿಸಿಎಂ ಭರವಸೆ

"ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿ ಸಂಬಂಧ ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಆ ಸಮಿತಿಯ ವರದಿಯನ್ನು ಪರಿಶೀಲಿಸಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು" ಎಂದು ಡಿಸಿಎಂ ಭರವಸೆ ನೀಡಿದ್ದಾರೆ.


"ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿ ಸಂಬಂಧ ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಆ ಸಮಿತಿಯ ವರದಿಯನ್ನು ಪರಿಶೀಲಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಮಾವೇಶದಲ್ಲಿ ಶಿವಕುಮಾರ್ ಅವರು ಗುರುವಾರ ಮಾತನಾಡಿದರು. “ಮುಖ್ಯಮಂತ್ರಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಲು ಇಚ್ಛೆ ಇತ್ತು. ಆದರೆ ಅವರಿಗೆ ವೈದ್ಯರು ವಿಶ್ರಾಂತಿ ಹೇಳಿದ್ದಾರೆ," ಎಂದು ಸ್ಪಷ್ಟಪಡಿಸಿದರು.

"ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಓಪಿಎಸ್ ಬಗ್ಗೆ ನಾವು ಭರವಸೆ ನೀಡಿದ್ದೆವು. ಅದರಂತೆ ಅದನ್ನು ಜಾರಿಗೆ ತರಲು ಬದ್ದರಾಗಿದ್ದೇವೆ. ನೀವು ಬಿಟ್ಟರೂ ಈ ವಿಚಾರವನ್ನು ನಾವು ಬಿಡುವುದಿಲ್ಲ. ಆದರೆ ಸ್ವಲ್ಪ ತಾಳ್ಮೆಯಿರಲಿ" ಎಂದು ತಿಳಿಸಿದರು.

“ಸರ್ಕಾರದ ರಥ ಎಳೆಯುವವರು ಸರ್ಕಾರಿ ನೌಕರರು. ನೀವು ಇಲ್ಲದಿದ್ದರೆ ಸರ್ಕಾರದ ಚಕ್ರ ಮುಂದಕ್ಕೆ ಸಾಗುವುದಿಲ್ಲ. ನಿಮ್ಮ ಸಂಘ ರಚನಾತ್ಮಕವಾಗಿ ಕೆಲಸ ಮಾಡುತ್ತಿದೆ. ಸರ್ಕಾರಿ ಕೆಲಸ ಕೇವಲ ಹುದ್ದೆಯಲ್ಲ. ಅದೊಂದು ಜವಾಬ್ದಾರಿ. ನೀವು ಹೃದಯ ಶ್ರೀಮಂತಿಕೆಯಿಂದ ಜವಾಬ್ದಾರಿ ಸರಿಯಾಗಿ ನಿಭಾಯಿಸಬೇಕು” ಎಂದರು.


ನಮ್ಮ ಸರ್ಕಾರದ‌ ಮೇಲೆ ಎಲ್ಲಾ ವರ್ಗದ ಜನರ ನಂಬಿಕೆ ಇಟ್ಟಿದ್ದಾರೆ. ಜಾತಿ, ಧರ್ಮದ ತಾರತಮ್ಯ ಮೇಲೆ ನನಗೆ ನಂಬಿಕೆ ಇಲ್ಲ. ಎಲ್ಲಾ ಜಾತಿ, ಸಮುದಾಯಗಳು ಬೇಕು. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದ ವಿಶ್ವಕ್ಕೆ ಶಾಂತಿ ಸಿಗಲಿ ಎಂದು ನಮ್ಮ ಗುರುಗಳು ಹೇಳಿದ್ದಾರೆ. ಪ್ರತಿಯೊಬ್ಬರೂ ತಮ್ಮ ಧರ್ಮದ ಮೇಲೆ ನಂಬಿಕೆ ಇಟ್ಟುಕೊಂಡಿರುತ್ತಾರೆ. ಅವರ ಆಚಾರ ವಿಚಾರ ಅವರದು. ನಾವು ಅದರಲ್ಲಿ ಯಾಕೆ ಮೂಗು ತೂರಿಸಬೇಕು” ಎಂದರು.

“ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರೆಲ್ಲರೂ ಒಂದೇ. ನಾವು ನಿಮ್ಮನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ. ನಿಮ್ಮ ಬೇಡಿಕೆಯನ್ನು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸೇರಿಸಿದ್ದೇವೆ," ಎಂದರು.

Read More
Next Story