Demand to Resume Bike Taxis: Rahul Gandhi Meets Drivers in Delhi
x

ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ

ಬೈಕ್ ಟ್ಯಾಕ್ಸಿ ಪುನಾರಂಭಕ್ಕೆ ಆಗ್ರಹ: ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದ ಚಾಲಕರು

ಚಾಲಕರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿದ ರಾಹುಲ್ ಗಾಂಧಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಘಟನೆಗಳು ತಿಳಿಸಿವೆ.


ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ನಿಷೇಧಿಸಿರುವುದರಿಂದ ಜೀವನೋಪಾಯಕ್ಕಾಗಿ ಸಂಕಷ್ಟಕ್ಕೆ ಸಿಲುಕಿರುವ ಚಾಲಕರು, ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ದೆಹಲಿಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಕರ್ನಾಟಕ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘದ ಪ್ರತಿನಿಧಿಗಳ ನಿಯೋಗವು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧದಿಂದ ಚಾಲಕರು ಎದುರಿಸುತ್ತಿರುವ ಗಂಭೀರ ಆರ್ಥಿಕ ಸಮಸ್ಯೆಗಳನ್ನು ವಿವರಿಸಿದರು. ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಒಂದು ಸಮರ್ಪಕ ನೀತಿಯನ್ನು ರೂಪಿಸುವವರೆಗೆ, ಚಾಲಕರ ವಿರುದ್ಧ ಯಾವುದೇ ದಂಡನಾತ್ಮಕ ಕ್ರಮಗಳನ್ನು ಕೈಗೊಳ್ಳದೆ ಸೇವೆಯನ್ನು ತಕ್ಷಣವೇ ಪುನರಾರಂಭಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಚಾಲಕರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿದ ರಾಹುಲ್ ಗಾಂಧಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ತಮ್ಮ ಜೀವನ ನಡೆಸಲು ಹೋರಾಡುತ್ತಿರುವ ಯುವ ಕಾರ್ಮಿಕರ ಪರವಾಗಿ ತಾನು ನಿಲ್ಲುವುದಾಗಿ ನೆರವಿನ ಭರವಸೆ ನೀಡಿದ್ದಾರೆ ಎಂದು ಸಂಘಟನೆಯು ತಿಳಿಸಿದೆ.

ರಾಹುಲ್ ಗಾಂಧಿ ಅವರ ಈ ಭರವಸೆಯಿಂದ, ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಂಡು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಾಜ್ಯದ 6 ಲಕ್ಷಕ್ಕೂ ಹೆಚ್ಚು ಚಾಲಕರು ಮತ್ತು ಅವರ ಕುಟುಂಬಗಳಲ್ಲಿ ಹೊಸ ಭರವಸೆ ಮೂಡಿದಂತಾಗಿದೆ ಎಂದು ಸಂಘವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Read More
Next Story