ಡೆಂಗ್ಯೂ ಭೀತಿ| ರಾಜ್ಯದಲ್ಲಿ 12 ಸಾವಿರ ಗಡಿ ತಲುಪಿದ ಪ್ರಕರಣಗಳ ಸಂಖ್ಯೆ
ಶುಕ್ರವಾರ ರಾಜ್ಯದಲ್ಲಿ 1,480ರಷ್ಟು ಕೇಸ್‌ಗಳು ದಾಖಲಾಗಿದ್ದು, ಹೊಸದಾಗಿ 448 ಮಂದಿಯಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಸಧ್ಯ ರಾಜ್ಯದಲ್ಲಿ 3,230 ಡೆಂಗ್ಯೂ ಪ್ರಕರಣಗಳು ಸಕ್ರಿಯವಾಗಿದ್ದು, ಅದರಲ್ಲಿ 2,610 ಮಂದಿಗೆ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ 620 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 604 ಮಂದಿಯನ್ನು ಸಾಮಾನ್ಯ ವಾರ್ಡ್ನಲ್ಲಿ ದಾಖಲಾತಿ ಮಾಡಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ನಿನ್ನೆ (ಶುಕ್ರವಾರ) ಕೂಡ 12 ಸಾವಿರ ಸಮೀಪ ಕೇಸ್‌ಗಳು ದಾಖಲಾಗಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕೇಸ್‌ಗಳು ಹೆಚ್ಚಳವಾಗುವ ಸಾಧ್ಯತೆ ಇದೆ.
ಶುಕ್ರವಾರ ರಾಜ್ಯದಲ್ಲಿ 1,480ರಷ್ಟು ಕೇಸ್‌ಗಳು ದಾಖಲಾಗಿದ್ದು, ಹೊಸದಾಗಿ 448 ಮಂದಿಯಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಸಧ್ಯ ರಾಜ್ಯದಲ್ಲಿ 3,230 ಡೆಂಗ್ಯೂ ಪ್ರಕರಣಗಳು ಸಕ್ರಿಯವಾಗಿದ್ದು, ಅದರಲ್ಲಿ 2,610 ಮಂದಿಗೆ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ 620 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 604 ಮಂದಿಯನ್ನು ಸಾಮಾನ್ಯ ವಾರ್ಡ್ನಲ್ಲಿ ದಾಖಲಾತಿ ಮಾಡಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ 24 ಗಂಟೆಯಲ್ಲಿ 0-1 ವರ್ಷದ 11 ಮಕ್ಕಳು, 1ರಿಂದ 18 ವರ್ಷದ 231 ಮಕ್ಕಳು ಹಾಗೂ 18 ವರ್ಷ ಮೇಲ್ಪಟ್ಟ 7,289 ಜನರಲ್ಲಿ ಡೆಂಗ್ಯೂ ದೃಢವಾಗಿದೆ. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ 4 ಸಾವಿರದ ಗಡಿದಾಟಿದ್ದು, ಕಳೆದ 24 ಗಂಟೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 265 ಪ್ರಕರಣಗಳು ದೃಢವಾಗಿವೆ. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ 4305 ಪ್ರಕರಣಗಳು ವರದಿಯಾಗಿದ್ದು ಮುಂದಿನ ಡಿಸೆಂಬರ್ ವರೆಗೂ ಡೆಂಗ್ಯೂ ಕೇಸ್ ಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳುತ್ತಿದ್ದಾರೆ.
ಇನ್ನು ಡೆಂಗ್ಯೂ ಹೆಚ್ಚಾಗುತ್ತಿರುವ ಹಿನ್ನೆಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜಾಗೃತಿ ಮೂಡಿಸುವ ಸಲುವಾಗಿ ಶುಕ್ರವಾರ ಫೀಲ್ಡ್‌ಗೆ ಇಳಿದಿದ್ದರು. ಬೆಂಗಳೂರಿನ ವಾರ್ಡ್‌ಗಳಲ್ಲಿ ಲಾರ್ವಾ ನಾಶಪಡಿಸುವ ಔಷಧಿ ಸಿಂಪಡಣೆ ಮಾಡುವ ಸಲುವಾಗಿ ಬೆಂಗಳೂರಿನ ರಾಮಸ್ವಾಮಿ ಪಾಳ್ಯದಲ್ಲಿ ಫೀವರ್ ಕ್ಲಿನಿಕ್‌ಗೆ ಚಾಲನೆ ನೀಡಿದರು. ರಾಮಸ್ವಾಮಿ ಪಾಳ್ಯದ ಕಾಲೋನಿಗಳಲ್ಲಿ ಪರಿಶೀಲನೆ ನಡೆಸಿ, ನೀರು ಶೇಖರಣೆ ಮಾಡದಂತೆ ನಿವಾಸಿಗಳಿಗೆ ತಿಳುವಳಿಕೆ ಹೇಳುವ ಮೂಲಕ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ ನೀರು ನಿಲ್ಲದಂತೆ ಎಚ್ಚರ ವಹಿಸಿ ಡೆಂಗ್ಯೂ ನಿಯಂತ್ರಣ ಮಾಡಿ ಎಂದು ಮನವಿ ಮಾಡಿದರು. ಅಲ್ಲದೇ ವಸಂತನಗರದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳಲ್ಲಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು. ಇದೇ ವೇಳೆ ಆರೋಗ್ಯ ಸಚಿವರಿಗೆ ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷದ್ ಅವರು ಕೂಡ ಸಾಥ್ ನೀಡಿದರು.