More potholes in the city during BJP rule, protests against the government are a disgrace
x

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಧರ್ಮಸ್ಥಳ ಪ್ರಕರಣ: ಎಸ್ಐಟಿ ತನಿಖೆ ಪಾರದರ್ಶಕ, ಬಿಜೆಪಿ ಮಾತಿಗೆ ಬೆಲೆ ಕೊಡಬೇಡಿ- ಸಚಿವ ರಾಮಲಿಂಗಾರೆಡ್ಡಿ

ಈಗ ನಮ್ಮ ಸರ್ಕಾರವು ದಕ್ಷ ಅಧಿಕಾರಿಗಳನ್ನು ಒಳಗೊಂಡ ಎಸ್ಐಟಿಯನ್ನು ರಚಿಸಿದ್ದು, ಅವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದಾರೆ" ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.


ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿಶೇಷ ತನಿಖಾ ದಳದ (SIT) ತನಿಖೆಯು ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ತನಿಖೆ ಪ್ರಗತಿಯಲ್ಲಿರುವಾಗ ಈ ಬಗ್ಗೆ ಮಾತನಾಡುವುದು ಸೂಕ್ತವಲ್ಲ ಎಂದ ಅವರು, ಈ ವಿಚಾರದಲ್ಲಿ ಬಿಜೆಪಿ ನಾಯಕರ ಹೇಳಿಕೆಗಳಿಗೆ ಬೆಲೆ ಕೊಡುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಪ್ರಕರಣದ ಕುರಿತು ಮಾತನಾಡಿದ ಅವರು, "ಈ ಹಿಂದೆ ಇದೇ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಆದರೆ, ಆಗ ತನಿಖೆ ಸರಿಯಾಗಿ ನಡೆದಿಲ್ಲ ಎಂಬ ಆರೋಪಗಳಿವೆ. ಈಗ ನಮ್ಮ ಸರ್ಕಾರವು ದಕ್ಷ ಅಧಿಕಾರಿಗಳನ್ನು ಒಳಗೊಂಡ ಎಸ್ಐಟಿಯನ್ನು ರಚಿಸಿದ್ದು, ಅವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದಾರೆ" ಎಂದು ಸ್ಪಷ್ಟಪಡಿಸಿದರು.

"ಬಿಜೆಪಿಯವರು ಯಾವ ಸಂದರ್ಭದಲ್ಲಿ ಏನು ಮಾತನಾಡುತ್ತಾರೆ ಎನ್ನುವುದೇ ಗೊತ್ತಾಗುವುದಿಲ್ಲ. ಕಳೆದ ನಾಲ್ಕು ವರ್ಷಗಳ ಕಾಲ ಅವರೇ ಅಧಿಕಾರದಲ್ಲಿದ್ದರು. ಆಗ ಅವರು ಏನು ಮಾಡಿದರು?" ಎಂದು ಪ್ರಶ್ನಿಸಿದ ರಾಮಲಿಂಗಾರೆಡ್ಡಿ, "ತನಿಖೆ ನಡೆಯುತ್ತಿರುವಾಗ ಅದರ ಬಗ್ಗೆ ಮಾತನಾಡುವುದು ಸರಿಯಲ್ಲ. ಸತ್ಯಾಸತ್ಯತೆ ತನಿಖೆಯಿಂದ ಹೊರಬರಲಿದೆ. ಅಲ್ಲಿಯವರೆಗೆ ಕಾಯಬೇಕು" ಎಂದು ಹೇಳಿದರು. ಈ ಮೂಲಕ, ರಾಜ್ಯ ಸರ್ಕಾರವು ತನಿಖೆಯ ವಿಷಯದಲ್ಲಿ ಯಾವುದೇ ಹಸ್ತಕ್ಷೇಪ ಮಾಡುತ್ತಿಲ್ಲ ಮತ್ತು ಎಸ್ಐಟಿ ಮೇಲೆ ಸಂಪೂರ್ಣ ವಿಶ್ವಾಸ ಹೊಂದಿದೆ ಎಂಬ ಸಂದೇಶವನ್ನು ಅವರು ರವಾನಿಸಿದ್ದಾರೆ.

Read More
Next Story