ಧರ್ಮಸ್ಥಳ ಪ್ರಕರಣ: ಎಸ್‌ಐಟಿಯಿಂದ ಇಬ್ಬರು ಐಪಿಎಸ್ ಅಧಿಕಾರಿಗಳು ನಿರ್ಗಮನ?
x

ಧರ್ಮಸ್ಥಳ ಪ್ರಕರಣ: ಎಸ್‌ಐಟಿಯಿಂದ ಇಬ್ಬರು ಐಪಿಎಸ್ ಅಧಿಕಾರಿಗಳು ನಿರ್ಗಮನ?

ಹಿಂದಿನ ಗಂಭೀರ ಪ್ರಕರಣಗಳ ತನಿಖೆಯಲ್ಲಿ ತೋರಿದ ಕರ್ತವ್ಯ ನಿಷ್ಠೆ ಮತ್ತು ಕಾರ್ಯದಕ್ಷತೆಯನ್ನು ಆಧರಿಸಿ ನಾಲ್ವರು ದಕ್ಷ ಐಪಿಎಸ್ ಅಧಿಕಾರಿಗಳನ್ನು ಎಸ್‌ಐಟಿಗೆ ಆಯ್ಕೆ ಮಾಡಿತ್ತು.


ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಧರ್ಮಸ್ಥಳ ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಆರಂಭದಲ್ಲೇ ವಿಘ್ನ ಎದುರಾಗುವ ಲಕ್ಷಣಗಳು ಕಾಣಿಸಿವೆ. ತಂಡದಲ್ಲಿರುವ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳ ಪೈಕಿ ಇಬ್ಬರು, ತನಿಖಾ ತಂಡದಿಂದ ಹೊರಗುಳಿಯಲು ಮುಂದಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಹಿಂದಿನ ಗಂಭೀರ ಪ್ರಕರಣಗಳ ತನಿಖೆಯಲ್ಲಿ ತೋರಿದ ಕರ್ತವ್ಯ ನಿಷ್ಠೆ ಮತ್ತು ಕಾರ್ಯದಕ್ಷತೆಯನ್ನು ಆಧರಿಸಿ ನಾಲ್ವರು ದಕ್ಷ ಐಪಿಎಸ್ ಅಧಿಕಾರಿಗಳನ್ನು ಎಸ್‌ಐಟಿಗೆ ಆಯ್ಕೆ ಮಾಡಿತ್ತು. ಆದರೆ, ಇದೀಗ ಇಬ್ಬರು ಅಧಿಕಾರಿಗಳು "ವೈಯಕ್ತಿಕ ಕಾರಣ"ಗಳನ್ನು ಮುಂದಿಟ್ಟುಕೊಂಡು ತಂಡದಿಂದ ಹೊರಬರಲು ಮನಸ್ಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ, ಇಬ್ಬರೂ ಅಧಿಕಾರಿಗಳು ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು, ತಮ್ಮನ್ನು ಎಸ್‌ಐಟಿ ಜವಾಬ್ದಾರಿಯಿಂದ ಕೈಬಿಡುವಂತೆ ಕೋರುವ ಸಾಧ್ಯತೆ ಇದೆ. ಒಂದು ವೇಳೆ ಈ ಬೆಳವಣಿಗೆ ನಡೆದರೆ, ಸರ್ಕಾರವು ಆ ಅಧಿಕಾರಿಗಳನ್ನು ಕರೆಸಿ ಮನವೊಲಿಸುವ ಪ್ರಯತ್ನ ನಡೆಸಬಹುದು ಎಂದು ಹೇಳಲಾಗುತ್ತಿದೆ. ಈ ಹಠಾತ್ ಬೆಳವಣಿಗೆಯು ಪ್ರಕರಣದ ತನಿಖೆಯ ಮುಂದಿನ ಹಾದಿಯ ಬಗ್ಗೆ ಕುತೂಹಲ ಮೂಡಿಸಿದೆ.

Read More
Next Story