ಧಾರವಾಡ ಲೋಕಸಭಾ ಕ್ಷೇತ್ರ | ಜೋಶಿ ವಿರುದ್ಧ ಕಣಕ್ಕೆ: ದಿಂಗಾಲೇಶ್ವರ ಸ್ವಾಮೀಜಿ ಘೋಷಣೆ
x

ಧಾರವಾಡ ಲೋಕಸಭಾ ಕ್ಷೇತ್ರ | ಜೋಶಿ ವಿರುದ್ಧ ಕಣಕ್ಕೆ: ದಿಂಗಾಲೇಶ್ವರ ಸ್ವಾಮೀಜಿ ಘೋಷಣೆ

ಕೆಲವು ದಿನಗಳಿಂದ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ ಜೋಶಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಆದರೆ ಸ್ಪರ್ಧೆ ಮಾಡುವ ಬಗ್ಗೆ ಈ ವರೆಗೂ ಸ್ವಾಮೀಜಿ ಬಹಿರಂಗಪಡಿಸಿರಲಿಲ್ಲ. ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ಹೇಳುತ್ತಿದ್ದರು.


ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ವಿರುದ್ಧ ಸ್ವತಂತ್ರವಾಗಿ ಕಣಕ್ಕಿಳಿಯುವುದಾಗಿ ದಿಂಗಾಲೇಶ್ವರ ಸ್ವಾಮೀಜಿ ಘೋಷಿಸಿದ್ದಾರೆ.

ಲಿಂಗಾಯತ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಸ್ವಾಮೀಜಿ ರಾಷ್ಟ್ರೀಯ ಪಕ್ಷಗಳ ಎದುರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಎದುರಿಸುತ್ತೇನೆ ಎಂದು ತಿಳಿಸಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸತತ ಐದನೇ ಬಾರಿ ಬಿಜೆಪಿಯಿಂದ ಚುನಾವಣಾ ಕಣದಲ್ಲಿದ್ದಾರೆ. ಕಾಂಗ್ರೆಸ್ ವಿನೋದ್ ಅಸೂಟಿಯನ್ನು ಕಣಕ್ಕಿಳಿಸಿದೆ. ಇದರ ನಡುವೆ ಧಾರವಾಡದಿಂದ ದಿಂಗಾಲೇಶ್ವರ ಸ್ವಾಮೀಜಿಗಳು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಇದರಿಂದ ಲಿಂಗಾಯತ ಮತಗಳು ವಿಭಜನೆಯಾಗಿ ಪ್ರಹ್ಲಾದ್ ಜೋಶಿ ಗೆಲುವು ಕಷ್ಟ ಆಗಬಹುದು ಎನ್ನಲಾಗಿದೆ.

ಕೆಲವು ದಿನಗಳಿಂದ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ ಜೋಶಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಆದರೆ ಸ್ಪರ್ಧೆ ಮಾಡುವ ಬಗ್ಗೆ ಈ ವರೆಗೂ ಸ್ವಾಮೀಜಿ ಬಹಿರಂಗಪಡಿಸಿರಲಿಲ್ಲ. ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ಹೇಳುತ್ತಿದ್ದರು.

ಧಾರವಾಡ ಸಂಸದ ಅಭ್ಯರ್ಥಿಯನ್ನು ಬದಲಾವಣೆ ಮಾಡುವಂತೆ ಕರೆ ನೀಡಿದ್ದರು. ಅವರ ನೇತೃತ್ವದಲ್ಲಿ ಸಭೆಗಳನ್ನು ನಡೆಸಲಾಗಿತ್ತು. ನಾನು ಸ್ವಂತವಾಗಿ ಮಾತನಾಡುತ್ತಿಲ್ಲ, ಪ್ರಲ್ಹಾದ್ ಜೋಶಿಯವರ ಕೈಯಲ್ಲಿ ನೋವು ಅನುಭವಿಸಿದ ಜನರ ಧ್ವನಿಯಾಗಿ ನಾನು ಹೋರಾಟ ನಡೆಸುತ್ತಿದ್ದೇನೆ. ಅವರ ಆಡಳಿತ ವಿನಾಶಕಾರಿಯಾಗಿದೆ ಎಂದು ಸ್ವಾಮೀಜಿ ಆರೋಪಿಸಿದ್ದರು.

ಅಂತಿಮವಾಗಿ ದಿಂಗಾಲೇಶ್ವರ ಸ್ವಾಮೀಜಿ ಪ್ರಲ್ಹಾದ್ ಜೋಶಿ ಅವರನ್ನು ಸೋಲಿಸುವ ಉದ್ದೇಶದಿಂದ ಸ್ವತಃ ಅವರೇ ಅಖಾಡಕ್ಕೆ ಇಳಿದಿದ್ದಾರೆ. ಇದೀಗ ಧಾರವಾಡ ಲೋಕಸಭಾ ಅಖಾಡ ಮತ್ತಷ್ಟು ರಂಗೇರಲಿದೆ.

Read More
Next Story