
ಚುನಾವಣಾ ಅಖಾಡದಿಂದ ಹಿಂದೆ ಸರಿದ ದಿಂಗಾಲೇಶ್ವರ ಸ್ವಾಮೀಜಿ: ಜೋಶಿ ನಿರಾಳ
ಧಾರವಾಡ ಲೋಕಸಭಾ ಚುನಾವಣಾ ಕಣದಲ್ಲಿ ರೋಚಕತೆ ಸೃಷ್ಟಿಸಿದ್ದ ದಿಂಗಾಲೇಶ್ವರ ಶ್ರೀಗಳು ಚುನಾವಣಾ ಅಖಾಡದಿಂದ ಹಿಂದೆ ಸರಿದಿದ್ದಾರೆ. ಸೋಮವಾರ ತಮ್ಮ ಇಲೆಕ್ಷನ್ ಎಜೆಂಟ್ ಸಚಿನ್ ಪಾಟೀಲ ಮೂಲಕ ನಾಮಪತ್ರ ಹಿಂಪಡೆದಿದ್ದಾರೆ.
ಕೇಂದ್ರ ಸಚಿವ, ಹಾಲಿ ಸಂಸದ ಪ್ರಹ್ಲಾದ್ ಜೋಶಿ ವಿರುದ್ಧ ತೊಡೆತಟ್ಟಿದ್ದ ದಿಂಗಾಲೇಶ್ವರ ಸ್ವಾಮೀಜಿ ಈಗ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಇದರಿಂದ ಪ್ರಹ್ಲಾದ್ ಜೋಶಿಗೆ ರಿಲೀಫ್ ಸಿಕ್ಕಂತಾಗಿದೆ.
ʻʻನನ್ನನ್ನು ಕಣದಿಂದ ಹಿಂದೆ ಸರಿಸುವ ವ್ಯಕ್ತಿ ಈ ಭೂಮಿ ಮೇಲೆ ಹಟ್ಟಿಲ್ಲʼʼ ಎನ್ನುವಂತಹ ಮಾತುಗಳನ್ನು ದಿಂಗಾಲೇಶ್ವರ ಸ್ವಾಮೀಜಿ ಪದೇ ಪದೇ ಹೇಳುತ್ತಿದ್ದರು. ಆದರೆ, ಕೊನೆ ಕ್ಷಣದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸ್ವಾಮೀಜಿ ಕದನ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಸೋಮವಾರವೇ ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದ್ದು, ಇಂದು ಅವರು ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ.
Next Story