ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ: ಸಮೀರ್ ಬಂಧನಕ್ಕೆ ವಾರಂಟ್
x

ಸಮೀರ್  ಎಂ ಡಿ

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ: ಸಮೀರ್ ಬಂಧನಕ್ಕೆ ವಾರಂಟ್

ಗುರುವಾರ ಬೆಳಗ್ಗೆ ಧರ್ಮಸ್ಥಳ ಪೊಲೀಸರು ಬೆಂಗಳೂರು ಸಮೀಪದ ಬನ್ನೇರುಘಟ್ಟಕ್ಕೆ ಆಗಮಿಸಿದ್ದಾರೆ. ಆದರೆ ಖಚಿತವಾಗಿ ವಿಳಾಸ ಸಿಕ್ಕಿರಲಿಲ್ಲ, ಈಗ ಮನೆಯನ್ನು ಸುತ್ತುವರೆದು ವಶಕ್ಕೆ ಪಡೆಯುವ ಸಾಧ್ಯತೆಯಿದೆ.


ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳನಕಾರಿ ವೀಡಿಯೊಗಳನ್ನು ಪ್ರಕಟಿಸಿದ ಆರೋಪದಲ್ಲಿ ʼಧೂಥʼ ಹೆಸರಿನ ಯೂಟ್ಯೂಬ್‌ ನಡಸುತ್ತಿದ್ದ ಸಮೀರ್‌ ಅವರನ್ನು ವಶಕ್ಕೆ ಪಡೆಯಲು ಧರ್ಮಸ್ಥಳ ಪೊಲೀಸರು ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಅವರ ಮನೆಗೆ ಭೇಟಿ ನೀಡಿದ್ದಾರೆ.

ಗುರುವಾರ ಬೆಳಗ್ಗೆ ಧರ್ಮಸ್ಥಳ ಪೊಲೀಸರು ಬನ್ನೇರುಘಟ್ಟಕ್ಕೆ ಆಗಮಿಸಿದ್ದಾರೆ. ಆದರೆ ಖಚಿತವಾಗಿ ವಿಳಾಸ ಸಿಕ್ಕಿರಲಿಲ್ಲ, ಈಗ ಮನೆಯನ್ನು ಸುತ್ತುವರೆದು ವಶಕ್ಕೆ ಪಡೆಯುವ ಸಾಧ್ಯತೆಯಿದೆ.

ಧರ್ಮಸ್ಥಳ ಕ್ಷೇತ್ರಕ್ಕೆ ಅಪಪ್ರಚಾರ ನಡೆಸಿದ್ದಕ್ಕೆ ರಾಜ್ಯದ್ಯಂತ ಆತನ ವಿರುದ್ಧ ಹಿಂದೂ ಸಂಘಟನೆಗಳು ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಸಮೀರ್‌ ಅನ್ನು ಬಂಧನ ಮಾಡುವಂತೆ ನೆಟ್ಟಿಗರು ಆಗ್ರಹಿಸುತ್ತಿದ್ದರು.

ಈ ಹಿಂದೆ ಮೂರು ಬಾರಿ ಸಮೀರ್ ಅವರಿಗೆ ನೋಟಿಸ್ ನೀಡಿದ್ದರೂ ಅವರು ಪ್ರತಿಕ್ರಿಯೆ ನೀಡಿರಲಿಲ್ಲ. ಹಾಗಾಗಿ, ಪೊಲೀಸರು ವಾರೆಂಟ್ ಪಡೆದು ಅವರನ್ನು ಬಂಧಿಸಲು ಬಂದಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರು ಸಮೀರ್ ಅವರ ಮನೆಯನ್ನು ಸುತ್ತುವರೆದಿದ್ದರೂ, ಅವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ಅವರ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.

ಒಂದು ಧರ್ಮ, ಧಾರ್ಮಿಕ ಕ್ಷೇತ್ರವನ್ನು ಅವಹೇಳನ ಮಾಡುವಂತಿಲ್ಲ. ಹೀಗಿದ್ದರೂ ಧರ್ಮಸ್ಥಳ ದೇವಸ್ಥಾನದ ವಿರುದ್ಧ ಎಐ ವಿಡಿಯೋ ಪ್ರಕಟಿಸಿ ಅವಹೇಳನ ಮಾಡಿದ್ದರೂ ಯಾಕೆ ಇನ್ನೂ ಆತನ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಬಿಜೆಪಿ ಮುಖಂಡರು ಸರ್ಕಾರವನ್ನು ಪ್ರಶ್ನಿಸಿದ್ದರು.

ಗುರುವಾರ ಉಡುಪಿ ಜಿಲ್ಲೆ ಬ್ರಹ್ಮಾವರದ 20ಕ್ಕೂ ಹೆಚ್ಚು ಪೊಲೀಸರು ಬೆಳ್ತಂಗಡಿಯಲ್ಲಿರುವ ಹಿಂದೂ ಜಾಗರಣ ವೇದಿಕೆ ಮುಖಂಡ ಹಾಗೂ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿದ್ದಾರೆ. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್‌ನನ್ನು ಕೂಡ ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Read More
Next Story