ಅಂತಾರಾಷ್ಟ್ರೀಯ ಮಟ್ಟದಿಂದ ಹಣ ವರ್ಗಾವಣೆ; ವಿಜಯೇಂದ್ರ ಹಗರಣ ಸದ್ಯದಲ್ಲೇ ಬಹಿರಂಗ: ಡಿಕೆಶಿ ಸ್ಫೋಟಕ ಹೇಳಿಕೆ
x

ಅಂತಾರಾಷ್ಟ್ರೀಯ ಮಟ್ಟದಿಂದ ಹಣ ವರ್ಗಾವಣೆ; ವಿಜಯೇಂದ್ರ ಹಗರಣ ಸದ್ಯದಲ್ಲೇ ಬಹಿರಂಗ: ಡಿಕೆಶಿ ಸ್ಫೋಟಕ ಹೇಳಿಕೆ

ವಿಜಯೇಂದ್ರ ಓರ್ವ ಅಪ್ರಬುದ್ಧ ರಾಜಕಾರಣಿ. ಅವರ ಹಗರಣಗಳನ್ನು ನಾವು ಸದ್ಯದಲ್ಲೇ ಬಹಿರಂಗಪಡಿಸುತ್ತೇವೆ. ಅಂತಾರಾಷ್ಟ್ರೀಯ ಮಟ್ಟದಿಂದ ಹಣ ವರ್ಗಾವಣೆಯಾಗಿರುವುದು ಸೇರಿದಂತೆ ಅನೇಕ ವಿಚಾರಗಳಿವೆ ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.


ವಿಜಯೇಂದ್ರ ಓರ್ವ ಅಪ್ರಬುದ್ಧ ರಾಜಕಾರಣಿ. ಅವರ ಹಗರಣಗಳನ್ನು ನಾವು ಸದ್ಯದಲ್ಲೇ ಬಹಿರಂಗಪಡಿಸುತ್ತೇವೆ. ಅವರ ಹಗರಣಗಳ ಬಗ್ಗೆ ಬಿಜೆಪಿ ಪಕ್ಷಕ್ಕೂ ಗೊತ್ತಿದೆ. ಅವರ ಅಂತಾರಾಷ್ಟ್ರೀಯ ಮಟ್ಟದಿಂದ ಹಣ ವರ್ಗಾವಣೆಯಾಗಿರುವುದು ಸೇರಿದಂತೆ ಅನೇಕ ವಿಚಾರಗಳಿವೆ. ಅವರ ತಂದೆ ಮುಖ್ಯಮಂತ್ರಿಯಾಗಿದ್ದಾಗ ಏನೆಲ್ಲಾ ಮಾಡಿದ್ದಾರೆ ಎಂದು ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಗಂಭೀರ ಆರೋಪ ಮಾಡಿದ್ದಾರೆ.

ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ತಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಯಾಕೆ? ವಿಜಯೇಂದ್ರ ಅವರು ಪ್ರಮಾಣಿಕರಾಗಿಲ್ಲ. ಹೀಗಾಗಿ ಅವರು ಈ ವಿಚಾರದಲ್ಲಿ ಮಾತನಾಡುವ ನೈತಿಕತೆ ಹೊಂದಿಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಪದೇ ಪದೆ ಪರಿಶಿಷ್ಟರ ಬಗ್ಗೆ ಮಾತನಾಡುತ್ತಾರೆ, ಹಾಗಾಗಿ ವಾಲ್ಮಿಕಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ಬಗ್ಗೆ ಮಾತನಾಡಬೇಕು ಎಂಬ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ರಾಹುಲ್ ಗಾಂಧಿ ಅವರಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಹಾಗೆ ನೋಡಿದರೆ ವಾಲ್ಮೀಕಿ ಹಗರಣದಲ್ಲಿ ಬ್ಯಾಂಕ್ ಅಧಿಕಾರಿಗಳು ಭಾಗಿಯಾಗಿರುವುದರಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ಮಾತನಾಡಬೇಕು. ಬ್ಯಾಂಕ್ ಗಳು ಕೇವಲ 2 ಗಂಟೆಗಳಲ್ಲಿ ಸಾಲವನ್ನು ಮಂಜೂರು ಮಾಡಿದ್ದು, ಬ್ಯಾಂಕುಗಳ ಅಧಿಕಾರವನ್ನು ಹೊಂದಿರುವ ನಿರ್ಮಲಾ ಸೀತರಾಮನ್ ಅವರ ಮಾತನಾಡಬೇಕು ಎಂದು ಅವರು ಕೇಳುತ್ತಿಲ್ಲ ಯಾಕೆ?" ಎಂದು ಪ್ರಶ್ನಿಸಿದರು.

ಮುಡಾ ಹಗರಣಕ್ಕೂ ಸಿಎಂಗೂ ಸಂಬಂಧವಿಲ್ಲ

ಮುಡಾ ಹಗರಣದಲ್ಲಿ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂಬ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಮುಡಾ ಹಗರಣಗಳನ್ನು ಮಾಡಿರುವುದು ಬಿಜೆಪಿ. ನಮ್ಮ ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದವರಿಗೂ ಈ ಅಕ್ರಮಕ್ಕೂ ಸಂಬಂಧವಿಲ್ಲ. ಮುಡಾ ಅವರು ಇವರ ಜಮೀನನ್ನು ಒತ್ತುವರಿ ಮಾಡಿಕೊಂಡ ಪರಿಣಾಮ ಮುಖ್ಯಮಂತ್ರಿಗಳ ಕುಟುಂಬದವರು ಮುಡಾ ಸಂಸ್ಥೆಯಿಂದ ಪರಿಹಾರ ಪಡೆಯಲು ಅರ್ಹರಾಗಿದ್ದು, ಅವರು ಪರಿಹಾರ ಪಡೆದಿದ್ದಾರೆ. ಕಾನೂನು ಪ್ರಕಾರವಾಗಿ ಅವರು ಪರಿಹಾರ ಪಡೆದಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬದಲಿ ನಿವೇಷನ ಕೇಳಿದ್ದಾರೆ. ಅದೇ ರೀತಿ ಅನೇಕರು ನಿವೇಷನ ಪಡೆದಿದ್ದಾರೆ. ಮುಡಾದಲ್ಲಿ ಅಕ್ರಮ ನಡೆದಿದ್ದರೆ ಅದು ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದಿದೆ. ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಅಕ್ರಮ ನಡೆದಿದೆ. ಈ ಕಾರಣಕ್ಕೆ ನಮ್ಮ ಮುಖ್ಯಮಂತ್ರಿಗಳು 2006ರಿಂದ ಮುಡಾ ಅಕ್ರಮ ತನಿಖೆ ನಡೆಸಲು ತೀರ್ಮಾನಿಸಲಾಗಿದೆ” ಎಂದು ತಿಳಿಸಿದರು.

Read More
Next Story