ಡಿಕೆ ಶಿವಕುಮಾರ್ ಇಂದು ದೆಹಲಿಗೆ: ಕಾಲ್ತುಳಿತ ದುರಂತದ ಬಳಿಕ ಮೊದಲ ಬಾರಿ ಹೈಕಮಾಂಡ್ ಭೇಟಿ
x

ಡಿಕೆ ಶಿವಕುಮಾರ್ ಇಂದು ದೆಹಲಿಗೆ: ಕಾಲ್ತುಳಿತ ದುರಂತದ ಬಳಿಕ ಮೊದಲ ಬಾರಿ ಹೈಕಮಾಂಡ್ ಭೇಟಿ

ಸರ್ಕಾರವನ್ನು ದೂಷಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿವೆ. ಪ್ರಮುಖವಾಗಿ ಇದು ಡಿಕೆ ಶಿವಕುಮಾರ್ ಅವರಿಂದ ಆಡ ಎಡವಟ್ಟು ಎಂದು ಹೇಳಲಾಗುತ್ತಿದೆ.


ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಜೂನ್ 8) ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಆಯೋಜಿಸಿರುವ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸುವುದು ಅವರ ಅಧಿಕೃತ ಉದ್ದೇಶವಾಗಿದ್ದರೂ, ಹೈಕಮಾಂಡ್ ಭೇಟಿ ಮಾಡಿ ಬರುವ ಸಾಧ್ಯತೆಗಳೂ ಇವೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸವದ ಕಾಲ್ತುಳಿತ ದುರಂತದ ನಂತರದ ಅವರ ಮೊದಲ ದೆಹಲಿ ಭೇಟಿ ಇದಾಗಿದೆ. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಹೈಕಮಾಂಡ್‌ನ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸುವ ಸಾಧ್ಯತೆಗಳಿವೆ.

ಆರ್‌ಸಿಬಿ ತಂಡದ ಐಪಿಎಲ್ ವಿಜಯೋತ್ಸವ ಮೆರವಣಿಗೆಯಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಘಟನೆಯು ರಾಜ್ಯ ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ್ದು, ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್, ಸರ್ಕಾರವನ್ನು ದೂಷಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿವೆ. ಪ್ರಮುಖವಾಗಿ ಇದು ಡಿಕೆ ಶಿವಕುಮಾರ್ ಅವರಿಂದ ಆಡ ಎಡವಟ್ಟು ಎಂದು ಹೇಳಲಾಗುತ್ತಿದೆ.

ಡಿಕೆ ಶಿವಕುಮಾರ್ ಅವರು ಈ ಕುರಿತು ಮಾತನಾಡಿ " ಓಪನ್-ರೂಫ್ ಬಸ್‌ ಮೆರವಣಿಗೆಗೆ ಅನುಮತಿ ನೀಡಲಾಗಿರಲಿಲ್ಲ. ಆರ್‌ಸಿಬಿ ಆಡಳಿತದಿಂದ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಮಾಹಿತಿ ನೀಡಲಾಗಿತ್ತು," ಎಂದು ಸ್ಪಷ್ಟನೆ ನೀಡಿದ್ದಾರೆ.

ಜೊತೆಗೆ, ಕರ್ನಾಟಕದ ಸಮಗ್ರ ರಾಜಕೀಯ ಪರಿಸ್ಥಿತಿ, ಮುಂಬರುವ ಚುನಾವಣೆಗಳಿಗೆ ಸಂಬಂಧಿಸಿದ ತಯಾರಿಗಳು, ಮತ್ತು ಪಕ್ಷದ ಸಂಘಟನೆಯ ಕುರಿತು ಸಹ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸಬಹುದು ಎಂದು ಹೇಳಲಾಗಿದೆ.

Read More
Next Story