Honey Trap | ನೀವು ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ: ಡಿ.ಕೆ. ಶಿವಕುಮಾರ್‌
x

ಕಾವೇರಿ ನದಿಯ ಉಗಮ ಸ್ಥಾನ ಕೊಡಗಿನ ತಲಕಾವೇರಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಪವಿತ್ರ ಸ್ನಾನ ಮಾಡಿದರು.

Honey Trap | ನೀವು ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ: ಡಿ.ಕೆ. ಶಿವಕುಮಾರ್‌

ಹನಿಟ್ರ್ಯಾಪ್ ಹಿಂದೆ ಡಿ.ಕೆ.ಶಿವಕುಮಾರ್ ತಂಡವಿದೆ ಎನ್ನುವ ಶಾಸಕ ಮುನಿರತ್ನ ಆರೋಪದ ಬಗ್ಗೆ ಮಾಧ್ಯಮದ ಪ್ರಶ್ನೆಗೆ, “ವಿಧಾನಸೌಧದಲ್ಲಿ ಅವರು ಏನೆಲ್ಲಾ ಮಾಡಿದ್ದರು ಎನ್ನುವುದು ಪೊಲೀಸ್ ದೂರಿನಲ್ಲಿ ಇದೆಯಲ್ಲವೇ?" ಎಂದು ಡಿ.ಕೆ. ಶಿವಕುಮಾರ್‌ ಮಾರುತ್ತರ ನೀಡಿದ್ದಾರೆ.


“ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಇದರ ಬಗ್ಗೆ ಶೀಘ್ರ ತನಿಖೆಯಾಗಬೇಕು ಎಂದು ನಾನೂ ಒತ್ತಾಯ ಮಾಡುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನ ಸದಾಶಿವನಗರದ ನಿವಾಸ ಹಾಗೂ ಭಾಗಮಂಡಲದ ಹೆಲಿಪ್ಯಾಡ್ ಬಳಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, 48 ಶಾಸಕರು ಹನಿಟ್ರ್ಯಾಪ್ ಗೆ ಒಳಗಾಗಿದ್ದಾರೆ, ಸರ್ಕಾರದ ಸಚಿವರಿಗೆ ರಕ್ಷಣೆ ಇಲ್ಲವೇ ಎಂದು ಕೇಳಿದಾಗ, “ಯಾರು ಹೇಳಿದ್ದು ರಕ್ಷಣೆಯಿಲ್ಲವೆಂದು? ಸುಮ್ಮನೆ ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಬರುತ್ತಾರೆಯೇ? ನೀವು ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ. ನೀವು ಪ್ರತಿಕ್ರಿಯೆ ನೀಡಲಿಲ್ಲ ಎಂದರೆ ಯಾರಾದರೂ ಮಾತನಾಡಿಸುತ್ತಾರಾ? ಮಾಧ್ಯಮದವರು ಮಾತಾನಾಡಿಸಿದರೆ ನಾನು ಮಾತನಾಡಿಸುತ್ತೇನೆ” ಎಂದು ಕಾಲೆಳೆದರು.

ಮಾಡಿದ್ದುಣ್ಣೋ ಮಹಾರಾಯ

ಹನಿಟ್ರ್ಯಾಪ್ ಹಿಂದೆ ಡಿ.ಕೆ.ಶಿವಕುಮಾರ್ ತಂಡವಿದೆ ಎನ್ನುವ ಶಾಸಕ ಮುನಿರತ್ನ ಆರೋಪದ ಬಗ್ಗೆ ಕೇಳಿದಾಗ, “ವಿಧಾನಸೌಧದಲ್ಲಿ ಅವರು ಏನೆಲ್ಲಾ ಮಾಡಿದ್ದರು ಎನ್ನುವುದು ಪೊಲೀಸ್ ದೂರಿನಲ್ಲಿ ಇದೆಯಲ್ಲವೇ ಆರ್.ಅಶೋಕ್ ಗೆ, ಯಡಿಯೂರಪ್ಪ ಅವರಿಗೆ ಏನೋ ಆಯಿತು ಎಂದು ಬಿಜೆಪಿಯವರೇ ಮಾತನಾಡುತ್ತಿದ್ದರಲ್ಲವೇ? ಅವರ ನೋವನ್ನು ಅವರು ಹೇಳಿಕೊಂಡಿದ್ದಾರೆ. ಮಾಡಿದ್ದುಣ್ಣೋ ಮಾರಾಯ. ಅವರ ಪಕ್ಷದವರಿಗೆ ಹೇಳಿ ಒಂದೊಳ್ಳೆ ಆಸ್ಪತ್ರೆಗೆ ಸೇರಿಸಿ ಪರೀಕ್ಷೆ ಮಾಡಿಸಲಿ. ಅವರಿಗೆ ಒಂದಷ್ಟು ತೊಂದರೆಗಳಿವೆ” ಎಂದು ವ್ಯಂಗ್ಯವಾಡಿದರು.


Read More
Next Story