2 ಸಾವಿರ ಕೋಟಿ ರೂ.ವೆಚ್ಚದಲ್ಲಿ ಚರಂಡಿ ಕಾಮಗಾರಿ: ಡಿ.ಕೆ ಶಿವಕುಮಾರ್‌
x

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌

2 ಸಾವಿರ ಕೋಟಿ ರೂ.ವೆಚ್ಚದಲ್ಲಿ ಚರಂಡಿ ಕಾಮಗಾರಿ: ಡಿ.ಕೆ ಶಿವಕುಮಾರ್‌

ಪ್ರಾಕೃತಿಕ ವಿಕೋಪ ನಿಲ್ಲಿಸಬಹುದೇ? ಯಾರೂ ತಡೆಯಲು ಸಾಧ್ಯವಿಲ್ಲ. ಅವರು ಟೀಕಿಸಲಿ, ನಾವು ನಮ್ಮ ಕರ್ತವ್ಯ ಮಾಡುತ್ತೇವೆ ಎಂದು ಡಿ. ಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ.


ಬೆಂಗಳೂರಿನ ಒಳಚರಂಡಿ ಕಾಮಗಾರಿ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು 2 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಸರ್ಕಾರ ಕಾಮಗಾರಿ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸರ್ಕಾರದ ಎರಡು ವರ್ಷಗಳ ಆಡಳಿತದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಯಾಣಿಸುವ ಮೊದಲು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ನೈಸರ್ಗಿಕ, ಪ್ರಾಕೃತಿಕ ಘಟನೆ, ಅದು ನಮ್ಮ ನಿಯಂತ್ರಣದಲ್ಲಿಲ್ಲ, ಆದರೆ ನಾವು ನಿಯಂತ್ರಿಸಬಹುದಾದ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಜನರಿಗೆ ಸಹಾಯ ಮಾಡಲು ಶ್ರಮಿಸುತ್ತಿದ್ದೇವೆ. ಬೆಂಗಳೂರಿನ ಒಳಚರಂಡಿ ಕಾಮಗಾರಿ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು 2 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಸರ್ಕಾರ ಕಾಮಗಾರಿ ನಡೆಸಲಿದೆ ಎಂದರು.

ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಆಡಳಿತದ ವೈಫಲ್ಯದ ಬಗ್ಗೆ ಪ್ರತಿಪಕ್ಷಗಳ ಟೀಕೆಗೆ ಪ್ರತ್ಯುತ್ತರ ನೀಡಿದ ಅವರು, "ಪ್ರಾಕೃತಿಕ ವಿಕೋಪ ನಿಲ್ಲಿಸಬಹುದೇ? ಯಾರೂ ತಡೆಯಲು ಸಾಧ್ಯವಿಲ್ಲ. ಅವರು ಟೀಕಿಸಲಿ, ನಾವು ನಮ್ಮ ಕರ್ತವ್ಯ ಮಾಡುತ್ತೇವೆ" ಎಂದರು. ಹೆಚ್ಚಿನ ಮಳೆಯಾಗುವ ಸಾಧ್ಯತೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, "ನಾನು ಮಳೆ ಬರಲಿ, ಯಾರಾದರೂ ಏನು ಬೇಕಾದರೂ ಹೇಳಲಿ, ಹೆಚ್ಚು ಮಳೆ ಬಂದರೆ ರಾಜ್ಯಕ್ಕೆ ಒಳ್ಳೆಯದು" ಎಂದು ಹೇಳಿದರು.

ನಗರದ ಹಲವಾರು ಭಾಗಗಳು ಜಲಾವೃತಗೊಂಡಿದ್ದು, ಅಧಿಕಾರಿಗಳು ಮಳೆಯಿಂದ ಉಂಟಾದ ಸಮಸ್ಯೆಗಳನ್ನು ಪರಿಹರಿಸಲು ಗಮನಹರಿಸುತ್ತಿದ್ದಾರೆ, ಯಾರೂ ಚಿಂತಿಸುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು.

ಜನರು ಮೊಣಕಾಲು ಆಳದ ನೀರಿನ ಮೂಲಕ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದ್ದು, ಹಲವಾರು ಸ್ಥಳಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ವರದಿಯಾಗಿದೆ. ಸೋಮವಾರ ಸಂಜೆ ಇಬ್ಬರು ಮೃತಪಟ್ಟ ಮಾಹಿತಿ ಸಿಕ್ಕಿದ್ದು ನಾವು ಅಧಿಕಾರಿಗಳನ್ನು ಕಳುಹಿಸಿದ್ದೇವೆ. ನಾನು ಕೂಡ ಹೋಗುತ್ತೇನೆ. ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಎಲ್ಲರೂ ಸ್ಥಳಕ್ಕೆ ಧಾವಿಸಿದ್ದಾರೆ. ಯಾರೂ ಚಿಂತಿಸುವ ಅಗತ್ಯವಿಲ್ಲ. ಜನರ ಜೀವ ಮತ್ತು ಆಸ್ತಿಗಳನ್ನು ಉಳಿಸುವುದು ನಮ್ಮ ಆದ್ಯತೆಯಾಗಿದೆ. ನಾವು ಅದಕ್ಕೆ ಬದ್ಧರಾಗಿದ್ದೇವೆ ಎಂದು ಅವರು ತಿಳಿಸಿದರು.

ಸೋಮವಾರ ರಾತ್ರಿ ನಾನು ಕೆಲವು ಸ್ಥಳಗಳಿಗೆ ಭೇಟಿ ನೀಡಿದ್ದೆ. ನಾವು ಎಲ್ಲೇ ಇದ್ದರೂ, ಬೆಂಗಳೂರಿನ ಹೆಮ್ಮೆಯನ್ನು ಉಳಿಸುವುದು ನಮ್ಮ ಕರ್ತವ್ಯ, ಮತ್ತು ನಾವು ಅದನ್ನು ಮಾಡುತ್ತೇವೆ ಎಂದರು.

Read More
Next Story