ಲೋಕಸಭೆ  ವಿಪಕ್ಷ ನಾಯಕನಾಗಿ ರಾಹುಲ್‌ ಗಾಂಧಿ; ಡಿಕೆಶಿ ಸ್ವಾಗತ
x

ಲೋಕಸಭೆ ವಿಪಕ್ಷ ನಾಯಕನಾಗಿ ರಾಹುಲ್‌ ಗಾಂಧಿ; ಡಿಕೆಶಿ ಸ್ವಾಗತ


ವಿರೋಧ ಪಕ್ಷದ ನಾಯಕನಾಗಬೇಕು ಎಂಬುದು ರಾಹುಲ್ ಗಾಂಧಿ ಅವರ ಬಯಕೆಯಲ್ಲ. ಇದು ಜನರ ಬಯಕೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ರಾಹುಲ್‌ ಗಾಂಧಿ ಅವರು ವಿಪಕ್ಷನಾಯಕನಾಗಲು ಒಪ್ಪಿಕೊಂಡಿರುವುದನ್ನು ಸ್ವಾಗತಿಸಿದ್ದಾರೆ.

ನಮ್ಮ ಮನವಿಯನ್ನು ಒಪ್ಪಿ ವಿರೋಧ ಪಕ್ಷದ ನಾಯಕ ಜವಾಬ್ದಾರಿ ವಹಿಸಿಕೊಂಡ ರಾಹುಲ್ ಗಾಂಧಿ ಅವರಿಗೆ ದೇಶದ ಜನರ ಪರವಾಗಿ, ಇಂಡಿಯಾ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಗೆ ರಾಹುಲ್ ಗಾಂಧಿ ಅವರು ಕೈಗೊಂಡಿರುವ ಈ ತೀರ್ಮಾನ ನಾವು ಸ್ವಾಗತಿಸುತ್ತೇವೆ.

ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ತೀರ್ಮಾನ ಕೈಗೊಂಡ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಹಾಗು ರಾಹುಲ್ ಗಾಂಧಿ ಅವರಿಗೆ ಒತ್ತಡ ಹಾಕಿದ ಇಂಡಿಯಾ ಮೈತ್ರಿಕೂಟ ನಾಯಕರಿಗೆ ಅಭಿನಂದನೆಗಳು. ಈ ದೇಶದ ರಕ್ಷಣೆ ಹಾಗೂ ಜನರ ಹಿತ ಕಾಯಲು ಇಂಡಿಯಾ ಮೈತ್ರಿಕೂಟ ಹೋರಾಟ ಮಾಡಲಿದೆ" ಎಂದು ತಿಳಿಸಿದರು.

Read More
Next Story