DKshi writes to renowned music director to compose a special song for Kaveri Aarti
x

ಸಂಗೀತ ನಿರ್ದೇಶಕ ಹಂಸಲೇಖ, ಡಿಸಿಎಂ ಡಿ.ಕೆ.‌ ಶಿವಕುಮಾರ್

ಕಾವೇರಿ ಆರತಿಗೆ ವಿಶೇಷ ಗೀತೆ: ಹಂಸಲೇಖ, ಸಾಧು ಕೋಕಿಲ, ಅರ್ಜುನ್ ಜನ್ಯಗೆ ಡಿಕೆಶಿ ಪತ್ರ

ಕಾವೇರಿ ಆರತಿಯನ್ನು ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಾತ್ಮಕವಾಗಿ ಶ್ರೀಮಂತಗೊಳಿಸುವ ಉದ್ದೇಶ ಹೊಂದಿದೆ. ಈ ಹಿನ್ನೆಲೆಯಲ್ಲಿ ಜಾನಪದ ಸೊಬಗು, ಧಾರ್ಮಿಕತೆಯ ಮೆರಗು ಹಾಗೂ ಭಕ್ತಿ ಭಾವದಿಂದ ಕೂಡಿರುವ ಗೀತೆಯನ್ನು ರಚಿಸುವ ಅಗತ್ಯವಿದೆ.


ಕರ್ನಾಟಕದ ಜೀವನದಿ ಕಾವೇರಿಗೆ ಗಂಗಾರತಿ ಮಾದರಿಯಲ್ಲಿ 'ಕಾವೇರಿ ಆರತಿ' ನಡೆಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಪೂರಕವಾಗಿ, ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧು ಕೋಕಿಲ ಹಾಗೂ ಅರ್ಜುನ್ ಜನ್ಯ ಅವರಿಗೆ ವಿಶೇಷ ಗೀತೆಯೊಂದನ್ನು ರಚಿಸಲು ಕಾವೇರಿ ಆರತಿ ಸಮಿತಿಯ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಪ ತ್ರ ಬರೆದಿದ್ದಾರೆ.

ಕಾವೇರಿ ಆರತಿಯನ್ನು ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಾತ್ಮಕವಾಗಿ ಶ್ರೀಮಂತಗೊಳಿಸುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ. ಈ ಹಿನ್ನೆಲೆಯಲ್ಲಿ, ಜಾನಪದ ಸೊಬಗು, ಧಾರ್ಮಿಕತೆಯ ಮೆರಗು ಹಾಗೂ ಭಕ್ತಿ ಭಾವದಿಂದ ಕೂಡಿರುವ ಗೀತೆಯನ್ನು ರಚಿಸುವ ಅಗತ್ಯವಿದೆ ಎಂದು ಡಿಕೆಶಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಕಾವೇರಿ ವೈಭವ ಸಾರುವ ಗೀತೆ

ಬದಲಾದ ಕಾಲಘಟ್ಟಕ್ಕೆ ಹೊಂದಿಕೊಳ್ಳುವಂತೆ, ವರ್ಣರಂಜಿತವಾಗಿ ಮೂಡಿಬರಲಿರುವ ಈ ಗೀತೆಯು ಕಾವೇರಿ ಮಾತೆಯ ಸಂಪೂರ್ಣ ಚಿತ್ರಣವನ್ನು ಕಣ್ಣಿಗೆ ಕಟ್ಟುವಂತಿರಬೇಕು. ಕಾವೇರಿ ಮಾತೆಯ ಪರಂಪರೆಯನ್ನು ಉಳಿಸುವುದರ ಜತೆಗೆ, ಜಲ ಶ್ರೀಮಂತಿಕೆ ಸಹಿತ ಕಾವೇರಿ ವೈಭವವನ್ನು ದೇಶ ವಿದೇಶಗಳಿಗೆ ಹಾಡು ಮತ್ತು ಸಂಗೀತದ ಮೂಲಕ ಸಾರುವ ಹಾಗೂ ಆರತಿಯ ಮಹಿಮೆಯನ್ನು ಮೇಳೈಸುವ ಅದ್ಭುತವಾದ ಸಾಹಿತ್ಯ ಮತ್ತು ಗೀತ ಸಂಯೋಜನೆ ಆಗಬೇಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಭಕ್ತಾದಿಗಳಲ್ಲಿ ಭಕ್ತಿ ಭಾವ ಹೆಚ್ಚಿಸುವ ಗುರಿ

ರಚನೆಯಾದ ಈ ಗೀತೆಯನ್ನು ಧ್ವನಿ ಸುರಳಿ ರೂಪದಲ್ಲಿ ತಂದು, ಕಾವೇರಿ ಆರತಿ ಸಂದರ್ಭದಲ್ಲಿ ಬರುವ ಭಕ್ತಾದಿಗಳಿಗೆ ಕಣ್ಣು ತುಂಬಿಕೊಳ್ಳುವಂತೆ ಮಾಡುವುದು ಇದರ ಪ್ರಮುಖ ಉದ್ದೇಶವಾಗಿದೆ. ಕಾವೇರಿಯ ಮೆರುಗನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾವೇರಿ ಮಾತೆ ಹಾಗೂ ಕಾವೇರಿ ಆರತಿಗೆ ಸಂಬಂಧಿಸಿದಂತೆ ಗೀತ ರಚನೆ ಮಾಡುವಂತೆ ಮನವಿ ಮಾಡಲಾಗಿದೆ. ಆಯ್ಕೆಯಾದ ಗೀತೆಯನ್ನು ಕಾವೇರಿ ಆರತಿ ಸಂದರ್ಭದಲ್ಲಿ ಪ್ರಸಾರ ಮಾಡಲಾಗುವುದು. ಈ ಮೂಲಕ ಕಾವೇರಿ ನದಿಯ ಮಹತ್ವವನ್ನು ಸಾಂಸ್ಕೃತಿಕವಾಗಿ ಎತ್ತಿ ಹಿಡಿಯುವ ಮತ್ತು ಭಕ್ತಾದಿಗಳಲ್ಲಿ ಭಕ್ತಿ ಭಾವವನ್ನು ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಡಿಕೆಶಿ ವಿವರಿಸಿದ್ದಾರೆ.

Read More
Next Story