Three youths from the state die in car accident in Andhra
x

ಸಾಂದರ್ಭಿಕ ಚಿತ್ರ

ದೊಡ್ಡಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು, ನಾಲ್ವರಿಗೆ ಗಂಭೀರ ಗಾಯ

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಈಶ್ವರಪ್ಪ, ಪುರುಷೋತ್ತಮ, ಕಾಳಪ್ಪ ಸೇರಿದಂತೆ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದಾರೆ. ಅಪಘಾತದ ರಭಸಕ್ಕೆ ಮೃತದೇಹಗಳು ರಸ್ತೆಯ ಮೇಲೆ ಚಲ್ಲಾಪಿಲ್ಲಿಯಾಗಿ ಬಿದ್ದಿದ್ದವು.


ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾದ ಪರಿಣಾಮ ಈ ದುರಂತ ಸಂಭವಿಸಿದೆ.

ದೊಡ್ಡಬಳ್ಳಾಪುರದ ಮಾಕಳಿ ಬಳಿಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ. ಬೆಳಿಗ್ಗೆ ದೇವಸ್ಥಾನಕ್ಕೆ ತೆರಳುತ್ತಿದ್ದ ಎಂಟು ಜನರಿದ್ದ ಇನ್ನೋವಾ ಕಾರು, ಮಳೆಯ ಕಾರಣದಿಂದ ರಸ್ತೆ ಜಾರುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಈಶ್ವರಪ್ಪ, ಪುರುಷೋತ್ತಮ, ಕಾಳಪ್ಪ ಸೇರಿದಂತೆ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದಾರೆ. ಅಪಘಾತದ ರಭಸಕ್ಕೆ ಮೃತದೇಹಗಳು ರಸ್ತೆಯ ಮೇಲೆ ಚಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಇನ್ನುಳಿದ ನಾಲ್ವರಿಗೆ ಗಂಭೀರವಾದ ಗಾಯಗಳಾಗಿದ್ದು, ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.

Read More
Next Story