ಜ. 16 ರಿಂದ 22ರವರೆಗೆ ತುಮಕೂರಿನಲ್ಲಿಕರ್ನಾಟಕ ಕ್ರೀಡಾಕೂಟ -26
x

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಇಂದು ಬಿಡುಗಡೆ ಮಾಡಿದರು. ನಗರದ ಕಂಠೀರವ ಕ್ರೀಡಾಂಗಣದ ಒಲಂಪಿಕ್ ಭವನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಈ ಲಾಂಛನವನ್ನು ಅನಾವರಣಗೊಳಿಸಲಾಯಿತು.

ಜ. 16 ರಿಂದ 22ರವರೆಗೆ ತುಮಕೂರಿನಲ್ಲಿ'ಕರ್ನಾಟಕ ಕ್ರೀಡಾಕೂಟ -26

ನಗರದ ಕಂಠೀರವ ಕ್ರೀಡಾಂಗಣದ ಒಲಂಪಿಕ್ ಭವನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಈ ಲಾಂಛನವನ್ನು ಅನಾವರಣಗೊಳಿಸಲಾಯಿತು.


Click the Play button to hear this message in audio format

ರಾಜ್ಯದ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗಿರುವ 'ಕರ್ನಾಟಕ ಕ್ರೀಡಾಕೂಟ 2025-26' ರ ಲಾಂಛನವನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಇಂದು ಬಿಡುಗಡೆ ಮಾಡಿದರು.

ನಗರದ ಕಂಠೀರವ ಕ್ರೀಡಾಂಗಣದ ಒಲಂಪಿಕ್ ಭವನದಲ್ಲಿ ಈ ಲಾಂಛನವನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಮುಂಬರುವ ಜನವರಿ 16 ರಿಂದ 22 ರವರೆಗೆ ತುಮಕೂರು ನಗರದಲ್ಲಿ ಈ ಬೃಹತ್ ಕ್ರೀಡಾಕೂಟ ನಡೆಯಲಿದ್ದು, ಯಶಸ್ವಿ ಆಯೋಜನೆಗೆ ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ತುಮಕೂರು ಜಿಲ್ಲೆಯ ಹೆಮ್ಮೆಯ ಸಂಕೇತವಾದ 'ಕೃಷ್ಣಮೃಗ'ವನ್ನು ಕ್ರೀಡಾಕೂಟದ ಲಾಂಛನವಾಗಿ (ಮ್ಯಾಸ್ಕಾಟ್) ಬಳಸಲಾಗಿದ್ದು, ಇದು ಕ್ರೀಡಾಕೂಟದ ಆಕರ್ಷಣೆಯಾಗಿದೆ ಎಂದರು.

ತುಮಕೂರಿನಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ಸುಮಾರು 70 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಜಿಲ್ಲಾ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಇದು ಸಿಂಥೆಟಿಕ್ ಟ್ರ್ಯಾಕ್ ಹಾಗೂ ಕ್ರೀಡಾಪಟುಗಳಿಗೆ ಸುಸಜ್ಜಿತ ವಸತಿ ಸೌಕರ್ಯಗಳನ್ನು ಹೊಂದಿದ್ದು, ಅಂತಾರಾಷ್ಟ್ರೀಯ ಮಟ್ಟದ ಕೂಟಗಳನ್ನು ನಡೆಸುವ ಸಾಮರ್ಥ್ಯ ಹೊಂದಿದೆ. ಈ ಕ್ರೀಡಾಕೂಟದಲ್ಲಿ ಒಟ್ಟು 27 ಕ್ರೀಡೆಗಳನ್ನು ಆಯೋಜಿಸಲಾಗಿದ್ದು, ಅವುಗಳಲ್ಲಿ 23 ಕ್ರೀಡೆಗಳು ತುಮಕೂರಿನಲ್ಲಿ ಹಾಗೂ ಕೇವಲ ನಾಲ್ಕು ಕ್ರೀಡೆಗಳು ಮಾತ್ರ ಬೆಂಗಳೂರಿನಲ್ಲಿ ನಡೆಯಲಿವೆ.

ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷರಾದ ಕೆ. ಗೋವಿಂದರಾಜ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ ಸಚಿವರು, ಕಳೆದ 25 ವರ್ಷಗಳಿಂದ ಅವರು ಕ್ರೀಡಾ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಅಪಾರ ಎಂದರು. ವಿವಿಧ ಕ್ರೀಡಾ ಸಂಸ್ಥೆಗಳಿಗೆ ತಲಾ 50 ಲಕ್ಷ ರೂ. ಅನುದಾನ ನೀಡುವ ಮೂಲಕ ರಾಜ್ಯದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಬೆಳೆಸಲಾಗುತ್ತಿದೆ. ದಸರಾ ಕ್ರೀಡಾಕೂಟದ ಆಚೆಗೂ ಕ್ರೀಡಾಪಟುಗಳಿಗೆ ಇಂತಹ ವೇದಿಕೆಗಳು ಸಿಗುತ್ತಿರುವುದು ಅವರ ಸಾಮರ್ಥ್ಯ ಪ್ರದರ್ಶನಕ್ಕೆ ಉತ್ತಮ ಅವಕಾಶವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್, ಕರ್ನಾಟಕ ಒಲಂಪಿಕ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಟಿ. ಅನಂತರಾಜ್, ಕ್ರೀಡಾ ಇಲಾಖೆಯ ಆಯುಕ್ತರಾದ ಚೇತನ್ ಆರ್, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಪ್ರಭು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Read More
Next Story