ಡಿ.ಆರ್‌. ಪಾಟೀಲರಿಗೆ ಸಂಪುಟ ಸ್ಥಾನಮಾನ; ವಿಕೇಂದ್ರೀಕರಣ ಸಮಿತಿಗೆ ಉಪಾಧ್ಯಕ್ಷರಾಗಿ ನೇಮಕ
x

ಡಿ. ಆರ್‌ ಪಾಟೀಲ್‌ 

ಡಿ.ಆರ್‌. ಪಾಟೀಲರಿಗೆ ಸಂಪುಟ ಸ್ಥಾನಮಾನ; ವಿಕೇಂದ್ರೀಕರಣ ಸಮಿತಿಗೆ ಉಪಾಧ್ಯಕ್ಷರಾಗಿ ನೇಮಕ

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕಾರ 310-ಬಿ ಉಪಪ್ರಕರಣ (2)ರಡಿ, ಸಾಮಾಜಿಕ–ಆರ್ಥಿಕ ಅಭಿವೃದ್ಧಿ ಕ್ಷೇತ್ರದಲ್ಲಿ ತಜ್ಞರಾಗಿ ಒಬ್ಬ ಸರ್ಕಾರಿ ಸದಸ್ಯರನ್ನು ನೇಮಿಸಲು ಅವಕಾಶವಿದ್ದು, ಅಂತೆಯೇ ಹೊರಡಿಸಲಾದ ಸರ್ಕಾರದ ಅಧಿಸೂಚನೆಯನ್ವಯ ಡಿ.ಆರ್‌. ಪಾಟೀಲರನ್ನು ಸರ್ಕಾರಿ ಸದಸ್ಯರಾಗಿ ನಿಯುಕ್ತಿಗೊಳಿಸಲಾಗಿತ್ತು


Click the Play button to hear this message in audio format

ಗದಗ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಡಿ.ಆರ್‌. ಪಾಟೀಲರನ್ನು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಸರ್ಕಾರ ನೇಮಿಸಿದೆ. ಈ ನೇಮಕಾತಿಯೊಂದಿಗೆ ಅವರಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಾಜ್ಯ ಸಚಿವರ ಸ್ಥಾನಮಾನ ಮತ್ತು ಸೌಲಭ್ಯಗಳನ್ನು ಮಂಜೂರು ಮಾಡಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕಾರ 310-ಬಿ ಉಪಪ್ರಕರಣ (2)ರಡಿ, ಸಾಮಾಜಿಕ–ಆರ್ಥಿಕ ಅಭಿವೃದ್ಧಿ ಕ್ಷೇತ್ರದಲ್ಲಿ ತಜ್ಞರಾಗಿ ಒಬ್ಬ ಸರ್ಕಾರಿ ಸದಸ್ಯರನ್ನು ನೇಮಿಸಲು ಅವಕಾಶವಿದ್ದು, ಈಂತೆಯೇ ಹೊರಡಿಸಲಾದ ಸರ್ಕಾರದ ಅಧಿಸೂಚನೆಯನ್ವಯ ಡಿ.ಆರ್‌. ಪಾಟೀಲರನ್ನು ಸರ್ಕಾರಿ ಸದಸ್ಯರಾಗಿ ನಿಯುಕ್ತಿಗೊಳಿಸಲಾಗಿತ್ತು. ಅದರ ಮುಂದುವರಿಕೆಯಾಗಿಯೇ ಈಗ ಅವರನ್ನು ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಿಸಿ, ರಾಜ್ಯ ಸಚಿವರ ಸ್ಥಾನಮಾನ ನೀಡಲಾಗಿದೆ.

Read More
Next Story