ರಾಜ್ಯ ಸರ್ಕಾರ ಕೇಳಿದಷ್ಟು ಬರ ಪರಿಹಾರ ಬರಲು ಸಾಧ್ಯವಿಲ್ಲ: ಎಚ್.ಡಿ.ಕುಮಾರಸ್ವಾಮಿ
x

ರಾಜ್ಯ ಸರ್ಕಾರ ಕೇಳಿದಷ್ಟು ಬರ ಪರಿಹಾರ ಬರಲು ಸಾಧ್ಯವಿಲ್ಲ: ಎಚ್.ಡಿ.ಕುಮಾರಸ್ವಾಮಿ

ರಾಜ್ಯ ಕೇಳಿದಷ್ಟು ಪರಿಹಾರವನ್ನು ನೀಡಲು ಸಾಧ್ಯವಿಲ್ಲ, ನೀಡಿದರೂ ರಾಜ್ಯ ಸರ್ಕಾರಕ್ಕೆ ತೃಪ್ತಿಯಾಗಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಎನ್‌ಡಿಆರ್‌ಎಫ್‌ ಮಾನದಂಡದಲ್ಲಿ ರಾಜ್ಯಕ್ಕೆ ಬರಬೇಕಾದಷ್ಟು ಬರ ಪರಿಹಾರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜ್ಯ ಸರ್ಕಾರ ಆರೋಪಿಸುತ್ತಿರುವುದರ ನಡುವೆಯೇ, ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರು ಕೇಂದ್ರವನ್ನು ಸಮರ್ಥಿಸಿದ್ದಾರೆ.

ರಾಜ್ಯ ಕೇಳಿದಷ್ಟು ಪರಿಹಾರವನ್ನು ನೀಡಲು ಸಾಧ್ಯವಿಲ್ಲ, ನೀಡಿದರೂ ರಾಜ್ಯ ಸರ್ಕಾರಕ್ಕೆ ತೃಪ್ತಿಯಾಗಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಮಾರ್ಗಸೂಚಿ ಆಧಾರದಲ್ಲಿ ಹಣ ಬಿಡುಗಡೆ ಮಾಡುತ್ತದೆ, ಕೇಳಿದಷ್ಟು ಹಣ ಕೊಡಲು ಸಾಧ್ಯವಿಲ್ಲ. ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ತಮ್ಮ ತಪ್ಪು ಮುಚ್ಚಿಡಲು ಕೇಂದ್ರದ ವಿರುದ್ಧ ಆರೋಪಿಸುತ್ತಿದೆ ಎಂದು ಅವರು ಹೇಳಿದರು.

ಹದಿನೈದನೇ ಆಯೋಗದ ಶಿಫಾರಸಿನ ಆಧಾರದಲ್ಲಿ ಹಣ ಬಿಡುಗಡೆಯಾಗುತ್ತದೆ, ಕೇಂದ್ರ ಸರ್ಕಾರ ಮೊದಲ ಕಂತಿನಲ್ಲಿ 3,454 ಕೋಟಿ ರು. ಪರಿಹಾರ ನೀಡಿದೆ. ಕಡಿಮೆ ಬಂದಿದೆ ಎಂದರೆ ಕೇಳಬಹುದು, ಅದು ಬಿಟ್ಟು ರಾಜಕೀಯ ಮಾಡಿಕೊಂಡಿದ್ದರೆ ಉಪಯೋಗವೇನು? ಎಂದು ಅವರು ಪ್ರಶ್ನಿಸಿದ್ದಾರೆ.

Read More
Next Story