ರಾಜ್ಯದಲ್ಲಿ  ಶಾಲೆಗಳಿಗೆ ದಸರಾ ರಜೆ ಘೋಷಣೆ
x
ಶಾಲಾ ಮಕ್ಕಳು

ರಾಜ್ಯದಲ್ಲಿ ಶಾಲೆಗಳಿಗೆ ದಸರಾ ರಜೆ ಘೋಷಣೆ

ನಾಡ ಹಬ್ಬ ದಸರಾ ಹಬ್ಬಕ್ಕೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್​ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.


Click the Play button to hear this message in audio format

ನಾಡ ಹಬ್ಬ ದಸರಾ ಹಬ್ಬಕ್ಕೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್​ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದರೆ ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ.

ಅಕ್ಟೋಬರ್​ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್​​ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್​ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.

ಅಕ್ಟೋಬರ್ 31 ರಂದು ದೀಪಾವಳಿ ಬರುವುದರಿಂದ, ಆ ದಿನ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಇರಲಿದೆ. ಒಟ್ಟಿನಲ್ಲಿ ಅಕ್ಟೋಬರ್ ತಿಂಗಳಲ್ಲಿ 13 ದಿನ ರಜೆ ಇರುವ ಸಾಧ್ಯತೆ ಇದೆ. ಡಿಸೆಂಬರ್ 22 ರಿಂದ 29 ರವರೆಗೆ ಕ್ರಿಸ್ಮಸ್ ರಜೆ ನೀಡಲಾಗುತ್ತದೆ.

ರಾಜ್ಯದಲ್ಲಿ 2024ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಯಿತು. ಮೊದಲ ಅವಧಿಯು ಅಕ್ಟೋಬರ್​​ 2ರ ತನಕ ಇರಲಿದೆ. ಸೆಪ್ಟೆಂಬರ್​ 23ರಿಂದ ಮಧ್ಯಂತರ ಪರೀಕ್ಷೆಗಳು ಶುರುವಾಗಿ ಸೆಪ್ಟೆಂಬರ್​ 30ರ ತನಕ ನಡೆಯಲಿದೆ. ಆ ಬಳಿಕ ಶಾಲಾ ಮಕ್ಕಳಿಗೆ ದಸರಾ ರಜೆ ಪ್ರಕ್ರಿಯೆ ಆರಂಭವಾಗಲಿದೆ. ಅಕ್ಟೋಬರ್​ 2ರಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಿದ ಮರು ದಿನದಿಂದ ಶಾಲಾ ಮಕ್ಕಳಿಗೆ ರಜೆ ಇರಲಿದೆ.

Read More
Next Story