
ವೀರೆಂದ್ರ ಪಪ್ಪಿ
ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೆಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ
ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ಪಪ್ಪಿ ನಿವಾಸ ಹಾಗೂ ಬೆಂಗಳೂರಿನ ವಸಂತನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಪ್ರೆಸ್ಟೀಜ್ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿದ್ದರು.
ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೆಂದ್ರ ಪಪ್ಪಿ ಅವರ ಮನೆ, ಕಚೇರಿಗಳು ಮತ್ತು ಅವರ ಆಪ್ತರ ನಿವಾಸಗಳ ಮೇಲೆ ಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಏಕಕಾಲಕ್ಕೆ ದಾಳಿ ನಡೆಸಿದೆ.
10ಕ್ಕೂ ಹೆಚ್ಚು ಅಧಿಕಾರಿಗಳ ತಂಡವು ಈ ದಾಳಿಯಲ್ಲಿ ಭಾಗವಹಿಸಿದ್ದು, ಮಹತ್ವದ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ಪಪ್ಪಿ ನಿವಾಸ ಹಾಗೂ ಬೆಂಗಳೂರಿನ ವಸಂತನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಪ್ರೆಸ್ಟೀಜ್ ಅಪಾರ್ಟ್ಮೆಂಟ್ ನಲ್ಲಿ ಶಾಸಕ ವಾಸವಾಗಿದ್ದರು. ದಾಳಿ ವೇಳೆ ಶಾಸಕ ಪ್ಲಾಟ್ ನಲ್ಲಿ ಇರಲಿಲ್ಲ. ವಿದೇಶಕ್ಕೆ ಹೋಗಿದ್ದಾರೆ ಎನ್ನಲಾಗಿದೆ.
ಆಸ್ತಿ ಗಳಿಕೆ ತೆರಿಗೆ ವಂಚನೆ ಕುರಿತು ದೂರು ಬಂದ ಹಿನ್ನೆಲೆ ಇಡಿ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಭದ್ರತಾ ಪಡೆಯೊಂದಿಗೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಮನೆ ಸುತ್ತಲೂ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ. 7 ಖಾಸಗಿ ವಾಹನಗಳಲ್ಲಿ ಇಡಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಚಳ್ಳಕೆರೆ ನಗರದಲ್ಲಿನ ಶಾಸಕ ಕೆಸಿ ವೀರೇಂದ್ರ ಪಪ್ಪಿ ನಿವಾಸಕ್ಕೆ ಬಂದು ಪರಿಶೀಲನೆ ನಡೆಸಲಾಗಿದೆ.