Mysore MUDA Scam| ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದು ಅಥವಾ ನಾಳೆ ಇ.ಡಿ. ಎಫ್ಐಆರ್‌? | ED officials likely to register FIR on Siddaramaiah today or tomorrow in muda case
Mysore MUDA Scam| ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದು ಅಥವಾ ನಾಳೆ ಇ.ಡಿ. ಎಫ್ಐಆರ್‌?
x

Mysore MUDA Scam| ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದು ಅಥವಾ ನಾಳೆ ಇ.ಡಿ. ಎಫ್ಐಆರ್‌?

ಕರ್ನಾಟಕ ಲೋಕಾಯುಕ್ತ ಪೊಲೀಸರು ದಾಖಲು ಮಾಡಿಕೊಂಡಿರುವ ಪ್ರಕರಣದ ಆಧಾರದ ಮೇಲೆ ಸೋಮವಾರ ಸಂಜೆ ಅಥವಾ ಮಂಗಳವಾರ ಇಡಿ ಅಧಿಕಾರಿಗಳು ಎಫ್ಐಆರ್ ದಾಖಲಿಸಲಿದ್ದಾರೆ


ಮುಡಾ ಹಗರಣದಲ್ಲಿ ರಾಜೀನಾಮೆಗೆ ಒತ್ತಡ ಹೆಚ್ಚಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಜಾರಿ ನಿರ್ದೇಶನಾಲಯ(ED)ದಿಂದ ಹೊಸ ಸಂಕಷ್ಟ ಎದುರಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರತಿಬಂಧಕ ಕಾಯ್ದೆಯಡಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಮಲ್ಲಿಕಾರ್ಜುಸ್ವಾಮಿ ಹಾಗೂ ಜೆ.ದೇವರಾಜು ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಳ್ಳಲು ತಯಾರಿ ನಡೆಸಿದೆ.

ಕರ್ನಾಟಕ ಲೋಕಾಯುಕ್ತ ಪೊಲೀಸರು ದಾಖಲು ಮಾಡಿಕೊಂಡಿರುವ ಪ್ರಕರಣದ ಆಧಾರದ ಮೇಲೆ ಸೋಮವಾರ ಸಂಜೆ ಅಥವಾ ಮಂಗಳವಾರ ಇಡಿ ಅಧಿಕಾರಿಗಳು ಎಫ್ಐಆರ್ ದಾಖಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೆ.28ರಂದು ಮೈಸೂರು ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ತನಿಖೆ ಆರಂಭಿಸಿದೆ. ಮೂಡಾ ಪ್ರಕರಣದ ತನಿಖೆಗಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದೆ.

ಲೋಕಾಯುಕ್ತದಲ್ಲಿ ಪ್ರಕರಣದ ದಾಖಲಾದ ಬಳಿಕ ಸಾಮಾಜಿಕ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೂ ದೂರು ಸಲ್ಲಿಸಿದ್ದರು.

ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೂಡಾ ಹಗರಣದ ಅವ್ಯವಹಾರಗಳಿಗೆ ಸಂಬಂಧಿಸಿದ ವಿವರಗಳು ಹಾಗೂ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್‌ ಮಾಹಿತಿ ಪಡೆದಿದ್ದಾರೆ. ಇದರಲ್ಲಿರುವ ಅಂಶಗಳು ಅಕ್ರಮ ಹಣ ವರ್ಗಾವಣೆ ಪ್ರತಿಬಂಧಕ ಕಾಯ್ದೆಯಡಿ ಬರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ದತೆಗಳನ್ನು ಮುಗಿಸಿ ಪ್ರಕರಣ ದಾಖಲಿಸಲಾಗುವುದು ಎಂದು ಜಾರಿ ನಿರ್ದೇಶನಾಲಯದ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಇತ್ತೀಚೆಗೆ ಜಾರಿ ನಿರ್ದೇಶನಾಲಯದ ತನಿಖೆಗೆ ಒಳಪಡುವ ಮೂರನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಿದ್ದಾರೆ. ಈ ಹಿಂದೆ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಜಾರಿನಿರ್ದೇಶನಾಲಯದ ತನಿಖೆಗೆ ಗುರಿಯಾಗಿದ್ದರು. ಈ ಇಬ್ಬರು ಮುಖ್ಯಮಂತ್ರಿಗಳು ಕೆಲ ತಿಂಗಳ ಕಾಲ ಜೈಲಿನಲ್ಲಿದ್ದು, ಈಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

Read More
Next Story