
ಬೇಲೆಕೇರಿ ಪ್ರಕರಣ; ಶಾಸಕ, ಗಣಿ ಉದ್ಯಮಿಗಳ ಮನೆ ಮೇಲೆ ಇಡಿ ದಾಳಿ
ಬೆಲೆಕೇರಿ ಅದಿರು ಅಕ್ರಮ ಸಾಗಣೆ ಪ್ರಕರಣದಲ್ಲಿ ಇಬ್ಬರೂ ಗಣಿ ಉದ್ಯಮಿಗಳು ಭಾಗಿಯಾಗಿರುವ ಆರೋಪ ಇದೆ. ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾತಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಕಾರವಾರ ಶಾಸಕ ಸತೀಶ್ ಸೈಲ್, ಗಣಿ ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಖಾರದಪುಡಿ ಮಹೇಶ್‌ಗೆ ಸೇರಿದ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯ ಗಣಿ ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಖಾರದಪುಡಿ ಮಹೇಶ್‌ಗೆ ಸೇರಿದ ಮನೆ, ಅಂಗಡಿ, ಕಚೇರಿಗಳಲ್ಲಿ ತಪಾಸಣೆ ನಡೆಸಲಾಗಿದೆ. ಸ್ವಸ್ತಿಕ್ ನಾಗರಾಜ್‌ಗೆ ಸೇರಿದ ಹೊಸಪೇಟೆಯ ಎಂಜೆ ನಗರದ ಮನೆ, ಎಪಿಎಂಸಿಯ ಬಳಿ ಇರೋ ಸ್ಟೀಲ್ ಅಂಗಡಿ ಮತ್ತು ಕಚೇರಿಯಲ್ಲಿ ತಪಾಸಣೆ ನಡೆಸಲಾಗಿದೆ.
ಬೆಲೆಕೇರಿ ಅದಿರು ಅಕ್ರಮ ಸಾಗಣೆ ಪ್ರಕರಣದಲ್ಲಿ ಇಬ್ಬರೂ ಗಣಿ ಉದ್ಯಮಿಗಳು ಭಾಗಿಯಾಗಿರುವ ಆರೋಪ ಇದೆ. ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ. ಹಣಕಾಸು ವಹಿವಾಟು ಸೇರಿದಂತೆ ಹಲವು ಮಾಹಿತಿಗಳನ್ನು ಕ್ರೋಢೀಕರಿಸಲಾಗಿದೆ. ತಪಾಸಣೆ ಕಾರ್ಯ ಮುಗಿದ ಬಳಿಕ ವಿಚಾರಣೆ ನಡೆಸಲು ನೊಟೀಸ್ ನೀಡಲಾಗುತ್ತದೆ. ಸ್ವಸ್ತಿಕ್ ನಾಗರಾಜ್ ಮತ್ತು ಖಾರದಪುಡಿ ಮಹೇಶ್ ತಮ್ಮ ಉದ್ಯಮದಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿರುವ ಸಾಧ್ಯತೆ ಇದೆ. ಈ ಬಗ್ಗೆ ಮಾಹಿತಿ ಪಡೆದು ಇಡಿ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಇನ್ನು ಶಾಸಕ ಸತೀಶ್ ಸೈಲ್ ಅವರ ಕಾರವಾರದ ನಿವಾಸದ ಮೇಲೂ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.