MLC Nomination | ಪರಿಷತ್ ಸದಸ್ಯರ ಆಯ್ಕೆ ; ಸಿದ್ದರಾಮಯ್ಯಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ ಹೈಕಮಾಂಡ್
x

MLC Nomination | ಪರಿಷತ್ ಸದಸ್ಯರ ಆಯ್ಕೆ ; ಸಿದ್ದರಾಮಯ್ಯಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ ಹೈಕಮಾಂಡ್

ನಿವೃತ್ತಿ ಹಾಗೂ ರಾಜೀನಾಮೆಯ ಕಾರಣ ವಿಧಾನ ಪರಿಷತ್ ನಲ್ಲಿ ನಾಲ್ಕು ಸ್ಥಾನಗಳು ಖಾಲಿಯಾಗಿವೆ. ಸದಸ್ಯರ ಕೊರತೆಯಿಂದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಮಸೂದೆ ಅಂಗಿಕರಿಸಲು ಬಹುಮತದ ಸದಸ್ಯರ ಸಂಖ್ಯೆ ಇಲ್ಲವಾಗಿದೆ.


ರಾಜ್ಯ ವಿಧಾನ ಪರಿಷತ್ ನಲ್ಲಿ ಖಾಕಿ ಉಳಿದಿರುವ ನಾಲ್ಕು ಸ್ಥಾನಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಸಂಪೂರ್ಣ ಸ್ವಾತಂತ್ರ್ಯವನ್ನು ಹೈ ಕಮಾಂಡ್ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದೆ.

ಕಳೆದ ಒಂದು ವರ್ಷದಿಂದ ಖಾಲಿ ಉಳಿದಿರುವ ಸ್ಥಾನಗಳಿಗೆ ನೂರಕ್ಕೂ ಅಧಿಕ ಆಕಾಂಕ್ಷಿಗಳಿರುವ ಹಿನ್ನೆಲೆಯಲ್ಲಿ ಜಾತಿ ಸಮೀಕರಣಕ್ಕೆ ಹೆಚ್ಚು ಒತ್ತು ನೀಡಬೇಕಾಗಿದೆ. ಅವಕಾಶ ವಂಚಿತ ಸಮುದಾಯಗಳಿಗೆ ಪರಿಷತ್ ನಲ್ಲಿ ಪ್ರಾತಿನಿಧ್ಯ ಕಲ್ಪಿಸುವ ಸಲುವಾಗಿ ಪರ್ಯಾಲೋಚಿಸುವ ಅನಿವಾರ್ಯತೆ ಸಿಎಂಗೆ ಎದುರಾಗಿದೆ.

ಸದಸ್ಯರ ನಾಮ ನಿರ್ದೇಶನ ಸಂದರ್ಭದಲ್ಲಿ ಈ ಎಲ್ಲ ಸಂಗತಿಗಳನ್ನು ಪರಿಗಣಿಸಿ ಪಟ್ಟಿ ಸಿದ್ಧಪಡಿಸಬೇಕಿದೆ. ಹಾಗಾಗಿ ಹೈ ಕಮಾಂಡ್ ಈ ವಿಷಯದಲ್ಲಿ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಮಾಡಿದ್ದ ಮನವಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಲ್ಕು ಪರಿಷತ್ ಸದಸ್ಯರ ನಾಮನಿರ್ದೇಶನ ವಿಷಯದಲ್ಲಿ ಹೈಕಮಾಂಡ್​ ಹಸ್ತಕ್ಷೇಪ ಮಾಡುವುದಿಲ್ಲ. ಈ ಸಂಬಂಧ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿ ಪಟ್ಟಿ ಅಂತಿಮಗೊಳಿಸಿದರೆ ಶೀಘ್ರ ಅನುಮೋದನೆ ನೀಡಲಾಗುವುದು ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

ರಾಹುಲ್ ಗಾಂಧಿ ಭೇಟಿ ನಂತರ ಸಿಎಂ ಸಿದ್ದರಾಮಯ್ಯ ಅವರು ಕೆ ಸಿ. ವೇಣುಗೋಪಾಲ್ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ತಾತ್ಕಾಲಿಕ ಪಟ್ಟಿ ಸಿದ್ದಪಡಿಸಿದ್ದಾರೆ ಎನ್ನಲಾಗಿದೆ. ನವದೆಹಲಿಯಲ್ಲೇ ಬಿಡುಬಿಟ್ಟಿರುವ ಸಿಎಂ ಹಾಗೂ ಡಿಸಿಎಂ ಶುಕ್ರವಾರವೂ ಈ ಸಂಬಂಧ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ನಿವೃತ್ತಿ ಹಾಗೂ ರಾಜೀನಾಮೆಯ ಕಾರಣ ವಿಧಾನ ಪರಿಷತ್ ನಲ್ಲಿ ನಾಲ್ಕು ಸ್ಥಾನಗಳು ಖಾಲಿಯಾಗಿವೆ.

ಸದಸ್ಯರ ಕೊರತೆಯಿಂದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಮಸೂದೆ ಅಂಗಿಕರಿಸಲು ಬಹುಮತದ ಸದಸ್ಯರ ಸಂಖ್ಯೆ ಇಲ್ಲವಾಗಿದೆ. ನಾಲ್ಕು ಸ್ಥಾನಗಳಿಗೆ ಸದಸ್ಯರನ್ನು ನಮನಿರ್ದೇಶನ ಮಾಡಿದಾರೆ ಸ್ಪಷ್ಟ ಬಹುಮತ ಸಿಗಲಿದೆ.

ಮೆಲ್ಮನೆಯಲ್ಲಿ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಬಹುತೇಕ ಸಮ ಸದಸ್ಯರನ್ನು ಹೊಂದಿದೆ. ಮೆಲ್ಮನೆಯಲ್ಲಿ ಒಟ್ಟು 75 ಸ್ಥಾನಗಳಿದ್ದು, ಇದರಲ್ಲಿ 64 ಮಂದಿ ಚುನಾಯಿತರಾದರೆ, 11ಮಂದಿಯನ್ನು ನಾಮನಿರ್ದೇಶನ ಮಾಡಲಾಗುತ್ತದೆ.

ಎನ್​ಡಿಎ 36 ಸದಸ್ಯರು

ಕಾಂಗ್ರೆಸ್ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಯು.ಬಿ ವೆಂಕಟೇಶ್, ಜೆಡಿಎಸ್ ಎಂಎಲ್ ಸಿ ತಿಪ್ಪೇಸ್ವಾಮಿ ನಿವೃತ್ತಿ ಹೊಂದಿದರೆ, ಬಿಜೆಪಿ ಸದಸ್ಯ ಸಿ. ಪಿ. ಯೋಗೇಶ್ವರ್ ರಾಜೀನಾಮೆ ನೀಡಿದ್ದು ಚನ್ನಪಟ್ಟಣದಿಂದ ಕಾಂಗ್ರೆಸ್​ನಿಂದ ಗೆದ್ದಿದ್ದಾರೆ. ಈ ನಾಲ್ಕು ಸ್ಥಾನಗಳಲ್ಲಿ ಎರಡು ಅಕ್ಟೋಬರ್ 2023 ರಿಂದ ಖಾಲಿ ಉಳಿದಿವೆ. ಇನ್ನೊಂದು ನವೆಂಬರ್ 2023 ರಿಂದ ಮತ್ತು ನಾಲ್ಕನೆಯದು 2024 ರಿಂದ ಖಾಲಿಯಾಗಿ ಉಳಿದಿದೆ.

Read More
Next Story