ಯಾವ ಸಮಯದಲ್ಲಾದರೂ ಎಲೆಕ್ಷನ್ ಎಂದ ಎಚ್‌ಡಿಕೆ, ಸರ್ಕಾರ ಪತನದ ಸೂಚನೆ ನೀಡಿದರೆ?
ರಾಜ್ಯದಲ್ಲಿ ಯಾವ ಸಮಯದಲ್ಲಾದರೂ ಮತ್ತೆ ಎಲೆಕ್ಷನ್ ಬರಬಹುದು. ಎಲ್ಲದಕ್ಕೂ ರೆಡಿಯಾಗಿರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾರ್ಯಕರ್ತರಿಗೆ ಹೇಳಿದ್ದಾರೆ.
ರಾಜ್ಯದಲ್ಲಿ ಯಾವ ಸಮಯದಲ್ಲಾದರೂ ಮತ್ತೆ ಎಲೆಕ್ಷನ್ ಬರಬಹುದು. ಎಲ್ಲದಕ್ಕೂ ರೆಡಿಯಾಗಿರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಆ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನದ ಸೂಚನೆ ನೀಡಿದರೆ ಮಾಜಿ ಮುಖ್ಯಮಂತ್ರಿ ಎಂಬ ಪ್ರಶ್ನೆ ಕೂಡ ಎದ್ದಿದೆ.
ಶಿವಮೊಗ್ಗದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂದಿನ ಎಲೆಕ್ಷನ್ 2028ರಲ್ಲೇ ಬರಬಹುದು, 2026ರಲ್ಲಿ ಅಥವಾ ಮುಂದಿನ ವರ್ಷ 2025ರಲ್ಲೇ ಬರಬಹುದು. ಯಾವುದಕ್ಕೂ ಮುಂದಿನ ಚುನಾವಣೆಗೆ ನೀವೆಲ್ಲ ಈಗಿನಿಂದಲೇ ಸಿದ್ಧರಾಗಿರಿ ಎಂದು ಹೇಳಿದ್ದಾರೆ.
ರಾಜ್ಯದ ಜನತೆಯಲ್ಲಿ ಈ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಸಮಾಧಾನ ಇದೆ. ಹಿಂದಿನ ಸರ್ಕಾರದ ಬಗ್ಗೆ ಆರೋಪ ಮಾಡುತ್ತಲೇ ಕಾಂಗ್ರೆಸ್ ಅಧಿಕಾರಕ್ಕೇರಿದೆ. ಆದರೆ, ಇಲ್ಲಿ ಅಭಿವೃದ್ಧಿ ಕಾಣದೆ ಜನ ಬೇಸತ್ತಿದ್ದಾರೆ. ಹಾಗಾಗಿ ಮುಂದಿನ ಮೂರೂವರೆ ವರ್ಷದವರೆಗೂ ಅವಧಿಯಿದ್ದರೂ ಕಾಂಗ್ರೆಸ್ ನಾಯಕರು ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಮಾತ್ರವೇ ಒಳ್ಳೆಯ ಸರ್ಕಾರ ನೀಡಲಿದೆ ಎಂಬ ವಿಶ್ವಾಸ ಹುಟ್ಟಿಸಬೇಕು. ನಮ್ಮ ಬಿಜೆಪಿ ಜೊತೆಗಿನ ಮೈತ್ರಿಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಜೆಡಿಎಸ್‌ನ ಬೇರು ಗಟ್ಟಿಯಾಗಿದೆ. ಆದರೆ, ಕೆಲವರು ನಮ್ಮ ಪಕ್ಷಕ್ಕೆ ಬರುತ್ತಾರೆ. ಎಲೆಕ್ಷನ್ ಮುಗಿದ ಮೇಲೆ ಬಿಟ್ಟು ಹೋಗುತ್ತಾರೆ. ಈ ಕಾರಣದಿಂದಲೇ ನಮ್ಮ ಪಕ್ಷಕ್ಕೆ ಹಿನ್ನಡೆಯಾಗುತ್ತಿದೆ. ಪ್ರತಿ ಬೂತ್ ಮಟ್ಟದಲ್ಲಿ ಯುವಕರು, ಮಹಿಳೆಯರನ್ನು ಪಕ್ಷಕ್ಕೆ ನೋಂದಣಿ ಮಾಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ.