Email Threat |ಕೊಲೆ ಮಾಡಿ ಫ್ರಿಡ್ಜ್, ಟ್ರಾಲಿ ಬ್ಯಾಗ್‌ಗೆ ತುಂಬುತ್ತೇನೆ;  ಸಿಎಂ, ಡಿಸಿಎಂಗೆ ಇಮೇಲ್‌ ಸಂದೇಶ
x

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ 

Email Threat |ಕೊಲೆ ಮಾಡಿ ಫ್ರಿಡ್ಜ್, ಟ್ರಾಲಿ ಬ್ಯಾಗ್‌ಗೆ ತುಂಬುತ್ತೇನೆ; ಸಿಎಂ, ಡಿಸಿಎಂಗೆ ಇಮೇಲ್‌ ಸಂದೇಶ

ಸಿಂಧಾರ್‌ ರಜಪೂತ್ ಹೆಸರಿನ ಇ-ಮೇಲ್‌ನಿಂದ ಈ ಬೆದರಿಕೆ ಸಂದೇಶ ಬಂದಿದೆ. ಸಿ.ಎಂ, ಡಿಸಿಎಂ ಮಾತ್ರವಲ್ಲದೆ ಗೃಹ ಸಚಿವರು, ನಗರ ಪೊಲೀಸ್ ಕಮಿಷನರ್‌ಗೂ ರವಾನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಬ್ಬರನ್ನೂ ಕೊಲೆ ಮಾಡಿ ಫ್ರಿಜ್ ಮತ್ತು ಟ್ರ್ಯಾಲಿ ಬ್ಯಾಗ್‌ಗೆ ತುಂಬುವುದಾಗಿ ಕಿಡಿಗೇಡಿಯೊಬ್ಬ ಇ-ಮೇಲ್ ಮೂಲಕ ಸಂದೇಶ ಕಳುಹಿಸಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಿಂಧಾರ್‌ ರಜಪೂತ್ ಹೆಸರಿನ ಇ-ಮೇಲ್‌ನಿಂದ ಈ ಬೆದರಿಕೆ ಸಂದೇಶ ಬಂದಿದೆ. ಸಿ.ಎಂ, ಡಿಸಿಎಂ ಮಾತ್ರವಲ್ಲದೆ ಗೃಹ ಸಚಿವರು, ನಗರ ಪೊಲೀಸ್ ಕಮಿಷನರ್‌ಗೂ ರವಾನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

'ರಾಮಪುರದ ಪ್ರಭಾಕರ್‌ಗೆ 1 ಕೋಟಿ ರೂ ಸಾಲ ಕೊಟ್ಟಿದ್ದೇನೆ. ಆದರೆ, ಆತ ಈವರೆಗೂ ಸಾಲ ವಾಪಸ್ ಕೊಟ್ಟಿಲ್ಲ. ಆದಷ್ಟು ಬೇಗ ಪ್ರಭಾಕರ್‌ಗೆ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಅಡಗಿಸಿಟ್ಟಿದ್ದಾನೆ. ಪ್ರಭಾಕರ್‌ಗೆ ಇಬ್ಬರು ಮಕ್ಕಳು ಇದ್ದಾರೆ. ಇತ್ತೀಚೆಗೆ ಆತನ ಒಬ್ಬ ಪುತ್ರನಿಗೆ ಮದುವೆಯಾಗಿದೆ. ಸಾಲದ ಹಣವನ್ನು ವಾಪಸ್ ನೀಡಲು ಆತನಿಗೆ ಆದಾಯ ಮೂಲ ಇಲ್ಲ. ಹೀಗಾಗಿ, ಪ್ರಭಾಕರ್‌ನನ್ನು ಕೊಲೆ ಮಾಡುತ್ತೇನೆ' ಎಂದು ಅದೇ ಇ-ಮೇಲ್‌ನಲ್ಲಿ ಉಲ್ಲೇಖಿಸಿದ್ದಾನೆ.

Read More
Next Story