ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ
x

ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ


ರಾಜ್ಯದ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾದ ಶಾಮನೂರು ಶಿವಶಂಕರಪ್ಪ (94) ಅವರು ಭಾನುವಾರ ಸಂಜೆ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ನಿಧನರಾದರು. ಕಳೆದ ಒಂದು ತಿಂಗಳಿಂದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದೆ ಅವರು ಕೊನೆಯುಸಿರೆಳೆದಿದ್ದಾರೆ.

1931ರ ಜೂನ್‌ 16ರಂದು ಜನಿಸಿದ ಶಾಮನೂರು ಶಿವಶಂಕರಪ್ಪ ಅವರು ದೀರ್ಘಕಾಲ ಸಕ್ರಿಯ ರಾಜಕೀಯದಲ್ಲಿ ತೊಡಗಿಕೊಂಡಿದ್ದರು. ಆರು ಬಾರಿ ವಿಧಾನಸಭೆಗೆ ಹಾಗೂ ಒಮ್ಮೆ ಲೋಕಸಭೆಗೆ ಜನಪ್ರತಿನಿಧಿಯಾಗಿ ಆಯ್ಕೆಯಾಗಿದ್ದ ಅವರು, ವಿವಿಧ ಸರ್ಕಾರಗಳಲ್ಲಿ ಸಚಿವರಾಗಿ ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದರು.

ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿಯೂ ಮಹತ್ವದ ಕೊಡುಗೆ ನೀಡಿದ್ದರು. ಅವರ ಪುತ್ರ ಎಸ್. ಎಸ್. ಮಲ್ಲಿಕಾರ್ಜುನ ಪ್ರಸ್ತುತ ರಾಜ್ಯದ ತೋಟಗಾರಿಕೆ ಸಚಿವರಾಗಿದ್ದು, ಸೊಸೆ ಪ್ರಭಾ ಮಲ್ಲಿಕಾರ್ಜುನ ಸಂಸದೆಯಾಗಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ರಾಜಕೀಯ ವಲಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Read More
Next Story