ಮಾನಹಾನಿ ಸುದ್ಧಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ಈಶ್ವರಪ್ಪ ಪುತ್ರ ಕಾಂತೇಶ್
x

ಮಾನಹಾನಿ ಸುದ್ಧಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ಈಶ್ವರಪ್ಪ ಪುತ್ರ ಕಾಂತೇಶ್


ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಅವರು ಅಶ್ಲೀಲ ಸಿಡಿ ಭೀತಿ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಯಾವುದೇ ಮಾನಹಾನಿಯಾಗುವಂತಹ ವರದಿ, ದೃಶ್ಯ, ಪೋಟೋ ಸೇರಿದಂತೆ ಯಾವುದೇ ರೀತಿಯ ಸುದ್ದಿಗಳನ್ನು ಪ್ರಕಟಿಸದಂತೆ ನ್ಯಾಯಾಲಯದಿಂದ ಮಾಧ್ಯಮಗಳ ವಿರುದ್ಧ ನಿರ್ಬಂಧ ಆದೇಶ ಪಡೆದಿದ್ದಾರೆ.

ಕಾಂತೇಶ್ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ಸಿಸಿಎಚ್ 11ನೇ ನ್ಯಾಯಾಲಯ ಇಂಟರ್ನೆಟ್, ಫೇಸ್ಬುಕ್, ವಾಟ್ಸ್ಯಾಪ್, ಯೂಟ್ಯೂಬ್ ಚಾನಲ್ ಸೇರಿದಂತೆ ಎಲ್ಲಾ ಮುದ್ರಣ, ದೃಶ್ಯ ಹಾಗೂ ಸಾಮಾಜಿಕ ಮಾಧ್ಯಮಗಳ ವಿರುದ್ಧ ನಿರ್ಬಂಧ ಆದೇಶ ನೀಡಿದೆ. ಅಲ್ಲದೆ, ಪ್ರಕರಣದ ಸಂಬಂಧ ಎಲ್ಲಾ 50 ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಆಗಸ್ಟ್ 3 ಕ್ಕೆ ಮುಂದೂಡಿದೆ.

ಅರ್ಜಿದಾರರ ಪರ ವಾದ ಆಲಿಸಿದ ಬಳಿಕ ನ್ಯಾಯಾಲಯ, ''ಮುಂದಿನ ಅದೇಶದವರೆಗೆ ಅರ್ಜಿದಾರರ ವಿರುದ್ಧ ಅವಹೇಳನಕಾರಿ ಅಥವಾ ಮಾನಹಾನಿಯಾಗುವಂತಹ ಯಾವುದೇ ರೀತಿಯ ಸುದ್ದಿ, ಪೋಟೊ, ದೃಶ್ಯಗಳನ್ನು ಪ್ರಸಾರ ಮಾಡುವಂತಿಲ್ಲ'' ಎಂದು ಆದೇಶಿಸಿದೆ.

ರಾಜ್ಯದ ಪ್ರಮುಖ ದಿನಪತ್ರಿಕೆಗಳು, ಟಿವಿ ಮಾಧ್ಯಮಗಳು, ಡಿಜಿಟಲ್ ಮತ್ತು ಜಾಲತಾಣಗಳನ್ನು ಸೇರಿದಂತೆ ಒಟ್ಟು ಐವತ್ತು ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ತರಲಾಗಿದೆ.

Read More
Next Story