
ಸಾಂದರ್ಭಿಕ ಚಿತ್ರ
ಅರಬೈಲ್ ಘಾಟ್‌ನಲ್ಲಿ ಎಥೆನಾಲ್ ಟ್ಯಾಂಕರ್‌ಗೆ ಬೆಂಕಿ; ಚಾಲಕ ಪ್ರಾಣಾಪಾಯದಿಂದ ಪಾರು
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಿಂದ ಕೇರಳಕ್ಕೆ ಎಥೆನಾಲ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್, ಅರಬೈಲ್ ಘಟ್ಟದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.
ತಾಲೂಕಿನ ಅರಬೈಲ್ ಘಟ್ಟದ ಮಾರುತಿ ದೇವಸ್ಥಾನದ ಸಮೀಪ, ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಶನಿವಾರ ಬೆಳಿಗ್ಗೆ ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್'ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ.
ಘಟನೆ ಹಿನ್ನೆಲೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಿಂದ ಕೇರಳಕ್ಕೆ ಎಥೆನಾಲ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್, ಅರಬೈಲ್ ಘಟ್ಟದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಪಲ್ಟಿಯಾದ ರಭಸಕ್ಕೆ ಟ್ಯಾಂಕರ್'ನ ಇಂಧನ ಟ್ಯಾಂಕ್‌ಗೆ ಹಾನಿಯಾಗಿದ್ದು, ಬೆಂಕಿ ಕಾಣಿಸಿಕೊಂಡಿದೆ. ಟ್ಯಾಂಕರ್'ನಲ್ಲಿ ಸುಲಭವಾಗಿ ಹೊತ್ತಿಕೊಳ್ಳುವ ಎಥೆನಾಲ್ ಇದ್ದುದರಿಂದ, ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿ, ಇಡೀ ಟ್ಯಾಂಕರ್ ಅನ್ನು ಆವರಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ, ಚಾಲಕ ಸಮಯಪ್ರಜ್ಞೆ ಮೆರೆದು ಟ್ಯಾಂಕರ್'ನಿಂದ ದೂರ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅವಘಡದಿಂದಾಗಿ ಹೆದ್ದಾರಿಯಲ್ಲಿ ಕೆಲವು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

