ಚರ್ಚಾ ವಿಷಯಗಳು ಸಾಕಷ್ಟಿವೆ… ಅಧಿವೇಶನ ವಿಸ್ತರಿಸಿ: ಸ್ಪೀಕರ್‌ಗೆ ಆರ್‌. ಅಶೋಕ್‌ ಪತ್ರ
x

ಚರ್ಚಾ ವಿಷಯಗಳು ಸಾಕಷ್ಟಿವೆ… ಅಧಿವೇಶನ ವಿಸ್ತರಿಸಿ: ಸ್ಪೀಕರ್‌ಗೆ ಆರ್‌. ಅಶೋಕ್‌ ಪತ್ರ

ಬೆಳಗಾವಿಯಲ್ಲಿ ಡಿಸೆಂಬರ್‌ 8 ರಿಂದ 19 ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಕಾರಣಾಂತರಗಳಿಂದ ಎರಡು ದಿನ ಮೊಟಕುಗೊಂಡಿದೆ.


Click the Play button to hear this message in audio format

ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ.

ಬೆಳಗಾವಿಯಲ್ಲಿ ಡಿಸೆಂಬರ್‌ 8 ರಿಂದ 19 ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಕಾರಣಾಂತರಗಳಿಂದ ಎರಡು ದಿನ ಮೊಟಕುಗೊಂಡಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿವೇಶವನ್ನು ಒಂದು ವಾರ ವಿಸ್ತರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಉತ್ತರ ನೀಡದ ಸಿಎಂ-ವಿಪಕ್ಷ ಗರಂ

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಶಾಸಕರು ಪ್ರಸ್ತಾಪ ಮಾಡಿರುವ ಹಲವು ಗಂಭೀರ ವಿಷಯಗಳಿಗೆ ಮುಖ್ಯಮಂತ್ರಿಗಳು ಮತ್ತು ಸಚಿವರು ಇನ್ನೂ ಉತ್ತರ ನೀಡಬೇಕಿದೆ. ಇದರ ಜೊತೆಗೆ ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುದಾನ ಬಳಕೆಯ ಕಳಪೆ ಸಾಧನೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಲು ಶಾಸಕರಿಗೆ ಇನ್ನೂ ಸಾಕಷ್ಟು ಸಮಯಾವಕಾಶದ ಅಗತ್ಯವಿದೆ. ಪಡಿತರ ಚೀಟಿಯ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಗರಂ ಆಗಿದ್ದಾರೆ.

ಕರ್ನಾಟಕದಾದ್ಯಂತ ಪಡಿತರ ಚೀಟಿಗಾಗಿ ಸಲ್ಲಿಸಿರುವ 3.22 ಲಕ್ಷಕ್ಕೂ ಅಧಿಕ ಅರ್ಜಿಗಳು ಬಾಕಿ ಉಳಿದಿವೆ. ಅವುಗಳಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಮತ್ತು ಬೆಂಗಳೂರಿನಿಂದ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಇಂತಹ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿ ಪರಿಹಾರ ಕಂಡುಕೊಳ್ಳಬೇಕಿದೆ. ಆದ್ದರಿಂದ ಅಧಿವೇಶನವನ್ನು ಒಂದು ವಾರ ವಿಸ್ತರಿಸುವ ಬಗ್ಗೆ ಕೂಡಲೇ ತೀರ್ಮಾನ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಚರ್ಚೆಗೆ ಸಿಗುತ್ತಿಲ್ಲ ಸಮಯ

ಇನ್ನು ಚರ್ಚೆಗೆ ಅವಕಾಶ ಸಿಗುತ್ತಿಲ್ಲ ಎಂಬುದು ಪ್ರತಿಪಕ್ಷಗಳ ಆರೋಪ. ಕಳೆದ ಸೋಮವಾರ ಆರಂಭವಾಗಿದ್ದ ಅಧಿವೇಶನದಲ್ಲಿ ಮೊದಲ ದಿನ ಕೇವಲ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲು ಸೀಮಿತವಾಗಿತ್ತು. ಇದಾದ ಎರಡು ದಿನಗಳಿಗೆ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗಳು ನಡೆದವು. ಆದರೆ ಅದಕ್ಕೆ ಸೂಕ್ತ ಉತ್ತರ ನೀಡುವಲ್ಲಿ ಸಿಎಂ ವಿಫಲರಾಗಿದ್ಧಾರೆ. ಅಲ್ಲದೇ ಇದೀಗ ಸದನವನ್ನು ಮೊಟಕುಗೊಳಿಸಿದ್ದಾರೆ. ಇಂದು ಕೂಡ ಕಾಂಗ್ರೆಸ್‌ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆ ಕಲಾಪ ರದ್ದುಗೊಂಡಿದೆ. ಹೀಗಾಗಿ ಚರ್ಚೆಗೆ ಇನ್ನಷ್ಟು ಕಾಲಾವಕಾಶ ಬೇಕು ಎಂಬುದು ವಿಪಕ್ಷಗಳು ಮನವಿ ಮಾಡಿವೆ.

Read More
Next Story