ಬೆಳಗಾವಿ ʼಗಾಂಧಿ ಭಾರತʼ | ಜನರ ತೆರಿಗೆ ಹಣದಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ: ಎಚ್‌ಡಿಕೆ ಟೀಕೆ
x
ಎಚ್‌.ಡಿ.ಕುಮಾರಸ್ವಾಮಿ

ಬೆಳಗಾವಿ ʼಗಾಂಧಿ ಭಾರತʼ | ಜನರ ತೆರಿಗೆ ಹಣದಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ: ಎಚ್‌ಡಿಕೆ ಟೀಕೆ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಟೀಕೆಯ ಬೆನ್ನಲ್ಲೇ ಜೆಡಿಎಸ್ ಕೂಡ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಜನರ ತೆರಿಗೆ ಹಣದಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್‌ಡಿಕೆ ಟೀಕಿಸಿದ್ದಾರೆ.


ಬೆಳಗಾವಿ ಐತಿಹಾಸಿಕ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವದ ʼಗಾಂಧಿ ಭಾರತʼ ಕಾರ್ಯಕ್ರಮಕ್ಕೆ 25 ಕೋಟಿ ರೂ.ಅನುದಾನ ಮಂಜೂರು ಮಾಡಿರುವ ರಾಜ್ಯ ಸರ್ಕಾರದ ಕ್ರಮ ತೀವ್ರ ಟೀಕೆಗೆ ಗುರಿಯಾಗಿದೆ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಟೀಕೆಯ ಬೆನ್ನಲ್ಲೇ ಜೆಡಿಎಸ್ ಕೂಡ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಜನರ ತೆರಿಗೆ ಹಣದಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧೀಜಿ ಶತಮಾನೋತ್ಸವ ಆಚರಿಸುತ್ತಿದೆ. ಆದರೆ ಅಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕಟೌಟ್ಗಳಲ್ಲಿ ಎಲ್ಲಿಯೂ ಗಾಂಧೀಜಿ ಫೋಟೋ ಇಲ್ಲ. ಬರೀ ನಕಲಿ ಗಾಂಧಿಗಳ ಫೋಟೋ ಕಟೌಟ್ಗಳನ್ನು ಆಕಾಶದೆತ್ತರ ಹಾಕಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈಗ ದೇಶದಲ್ಲಿ ಇರುವುದು ಅಸಲಿ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್. ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡುತ್ತಿರುವುದು ಅದೇ ನಕಲಿ ಕಾಂಗ್ರೆಸ್. ಸ್ವಾತಂತ್ರ್ಯ ಗಳಿಸಿದ ಮೇಲೆ ಕಾಂಗ್ರೆಸ್ ವಿಸರ್ಜನೆ ಮಾಡಿ ಎಂದು ಸ್ವತಃ ಮಹಾತ್ಮ ಗಾಂಧಿ ಅವರು ಹೇಳಿದ್ದರು. ಈಗ ಇರುವುದು ಆಲಿಬಾಬ ಮತ್ತು 40 ಮಂದಿ ಕಳ್ಳರ ಕಾಂಗ್ರೆಸ್ ಎಂದು ವಾಗ್ದಾಳಿ ನಡೆಸಿದ್ದಾರೆ.

ಗಾಂಧಿ ಹೆಸರಲ್ಲಿ ಕಾರ್ಯಕ್ರಮ ನಡೆಸಲು ನನ್ನ ತಕರಾರಿಲ್ಲ. ಗಾಂಧೀಜಿ ರಾಮರಾಜ್ಯದ ಪರಿಕಲ್ಪನೆ ಇವತ್ತು ರಾಜ್ಯದಲ್ಲಿ ಸಾಕಾರ ಆಗಿದೆಯಾ?, ಅವರ ಗ್ರಾಮ ಸ್ವರಾಜ್ಯದ ಕನಸು ಈಡೇರಿದೆಯಾ ಎಂದು ಪ್ರಶ್ನಿಸಿದ್ದಾರೆ.

ನಕಲಿ ಕಾಂಗ್ರೆಸ್ ಅಧಿವೇಶನ: ಬೊಮ್ಮಾಯಿ ಟೀಕೆ

ಮಹಾತ್ಮ ಗಾಂಧಿ ಅವಧಿಯ ಕಾಂಗ್ರೆಸ್ಸಿಗೂ ಇಂದಿನ ಕಾಂಗ್ರೆಸ್ಸಿಗೂ ಬಹಳ ವ್ಯತ್ಯಾಸವಿದೆ. ಗಾಂಧೀಜಿಯವರ ಆದರ್ಶಗಳಿಗೆ ತದ್ವಿರುದ್ಧವಾಗಿ ಈಗಿನ ಕಾಂಗ್ರೆಸ್ ನಾಯಕರು ನಡೆದುಕೊಳ್ಳುತ್ತಿದ್ದಾರೆ. ಸರ್ಕಾರದ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ಹದಗೆಟ್ಟಿದೆ. ಎಲ್ಲಾ ಇಲಾಖೆ, ನಿಗಮಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗಾಂಧಿಯವರ ಸ್ವರಾಜ್ಯ ಕಲ್ಪನೆಗೆ ತದ್ವಿರುದ್ದವಾಗಿ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಅಧಿವೇಶನಕ್ಕೆ ಸರ್ಕಾರದ ಹಣ ಬಳಸುತ್ತಿರುವುದು ಎಷ್ಟು ಸರಿ?, ಇದು ಯಾವ ಕಾನೂನಿನಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

Read More
Next Story