
ಮೃತ ವಿದ್ಯಾರ್ಥಿ ಅಂಶ್
ವಿಜಯಪುರದ ಶ್ರೀಸತ್ಯ ಸಾಯಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ
ಯೋಗಾಪುರ ಕಾಲೊನಿಯಲ್ಲಿರುವ ಶ್ರೀಸತ್ಯ ಸಾಯಿ ಬಾಬಾ ಶಿಕ್ಷಣ ಸಂಸ್ಥೆಯಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳ ನಡುವೆ ಜಗಳ ನಡೆದಿತ್ತು. ಈ ದುರ್ಘಟನೆ ನಡೆಯಲು ಶಾಲಾ ಆಡಳಿತ ಮಂಡಳಿ ಬೇಜವಬ್ದಾರಿತನವೇ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಲಾ ವಿದ್ಯಾರ್ಥಿಗಳ ಜಗಳದಲ್ಲಿ ಗಾಯಗೊಂಡಿದ್ದ ಐದನೇ ತರಗತಿ ವಿದ್ಯಾರ್ಥಿ ಅಂಶ್(9) ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು, ಶಾಲಾ ಮಂಡಳಿ ವಿರುದ್ದ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲೆಯ ಯೋಗಾಪುರ ಕಾಲೊನಿಯಲ್ಲಿರುವ ಶ್ರೀಸತ್ಯ ಸಾಯಿ ಬಾಬಾ ಶಿಕ್ಷಣ ಸಂಸ್ಥೆಯಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳ ನಡುವೆ ಜಗಳ ನಡೆದಿತ್ತು. ಈ ದುರ್ಘಟನೆ ನಡೆಯಲು ಶಾಲಾ ಆಡಳಿತ ಮಂಡಳಿ ಬೇಜವಬ್ದಾರಿತನವೇ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ 4ರಂದು ಅಂಶ್ ಮತ್ತು ಶಾಲೆಯ ಇತರೆ ವಿದ್ಯಾರ್ಥಿಗಳ ನಡುವೆ ಜಗಳವಾಗಿದೆ. ಘಟನೆಯಲ್ಲಿ ಗಾಯಗೊಂಡ ಅಂಶ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆತಂದಿದ್ದೆವು. ರಾತ್ರಿ ಏಕಾಏಕಿ ಉಸಿರಾಟದಲ್ಲಿ ತೊಂದರೆಯಾಗಿ ಮೃತಪಟ್ಟ. ಆತನ ಸಾವಿನ ಬಗ್ಗೆ ಅನುಮಾನ ಇದೆ. ಅಂಶ್‌ಗೆ ಈ ಮೊದಲು ಅನಾರೋಗ್ಯ ಸಮಸ್ಯೆಯೂ ಇತ್ತು ಎಂದು ಬಾಲಕನ ತಂದೆ ಸುನೀಲ್ ಪೊಲೀಸರಿಗೆ ದೂರು ನೀಡಿದ್ದಾರೆ.
ಉತ್ತರಪ್ರದೇಶ ರಾಜ್ಯದ ಜಾಲೂನ್ ಜಿಲ್ಲೆಯ ಕಕ್ರೋಲಿ ಗ್ರಾಮದ ಸುನೀಲ್ ಜಾಟಪ್ ಮತ್ತು ಶೃತಿ ದಂಪತಿಯು ವಿಜಯಪುರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ವಾಸವಿದ್ದರು. ತಳ್ಳುವ ಗಾಡಿಯಲ್ಲಿ ಪಾನಿಪುರಿ ವ್ಯಾಪಾರ ಮಾಡುತ್ತ ಬಾಡಿಗೆ ಮನೆಯಲ್ಲಿ ವಾಸವಿದ್ದರು.
"ಬಾಲಕನ ಸಾವಿನ ಬಗ್ಗೆ ಅನುಮಾನಗಳು ಇವೆ. ಈವರೆಗೆ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ, ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ಖಚಿತ ಕಾರಣ ಗೊತ್ತಾಗಲಿದೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.