ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ;  ಎಂಎಲ್‌ಸಿ ರವಿಕುಮಾರ್‌ ವಿರುದ್ಧ ಎಫ್‌ಐಆರ್‌
x

ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ; ಎಂಎಲ್‌ಸಿ ರವಿಕುಮಾರ್‌ ವಿರುದ್ಧ ಎಫ್‌ಐಆರ್‌

ನಾಗರತ್ನ ನೀಡಿದ ದೂರಿನ ಆಧಾರದಲ್ಲಿ ವಿಧಾನಸೌಧ ಪೊಲೀಸರು ರವಿಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌)ಯ 351 (3), 75 (3) 79 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಹಿರಿಯ ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್‌ ಅವರ ವಿರುದ್ಧ ಕೀಳು ದರ್ಜೆಯ ಭಾಷೆ ಬಳಸಿದ ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಪ್ರಕಾರ ಲೈಂಗಿಕ ಕಿರುಕುಳ, ಬೆದರಿಕೆ ಮತ್ತಿತರ ಪ್ರಕರಣಗಳನ್ನು ದಾಖಲಿಸಲಾಗಿದೆ.

ನಾಗರತ್ನ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ವಿಧಾನಸೌಧ ಪೊಲೀಸರು ರವಿಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌)ಯ 351 (3), 75 (3) 79 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರಿನ ಕಾಡುಗೋಡಿ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಎರಡು ದಿನಗಳ ಹಿಂದಷ್ಟೇ ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದರು. ರಾಜ್ಯ ಸರ್ಕಾರ ಒತ್ತುವರಿ ತೆರವಿಗೆ ಮುಂದಾಗಿರುವ ಭೂಮಿಯಲ್ಲಿ ಪರಿಶಿಷ್ಟ ಜಾತಿಯ ಹಲವು ಕುಟುಂಬಗಳಿದ್ದು, ಕೂಡಲೇ ಒತ್ತುವರಿ ತೆರವು ಕಾರ್ಯ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದರು.

ಪ್ರತಿಭಟನೆಯ ನಂತರ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಲು ಬಿಜೆಪಿ ನಾಯಕರು ಸಿದ್ಧತೆ ನಡೆಸಿದ್ದರು. ಆದರೆ, ಆ ವೇಳೆ ಮುಖ್ಯ ಕಾರ್ಯದರ್ಶಿ ಕಚೇರಿಯಲ್ಲಿ ಇರಲಿಲ್ಲ. ಈ ಸಂದರ್ಭದಲ್ಲಿ ಶಾಲಿನಿ ರಜನೀಶ್‌ ಕುರಿತು ಎನ್‌. ರವಿಕುಮಾರ್‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ದೂರಲಾಗಿದೆ.

ಬಿಜೆಪಿಯ ವಿಧಾನ ಪರಿಷತ್ ಮುಖ್ಯ ಸಚೇತಕರೂ ಆಗಿರುವ ಎನ್‌. ರವಿಕುಮಾರ್ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಕಾಂಗ್ರೆಸ್‌ ಪಕ್ಷದ ವತಿಯಿಂದ ಮಹಿಳಾ ಆಯೋಗ ಹಾಗೂ ವಿಧಾನ ಪರಿಷತ್‌ ಸಭಾಪತಿಗೂ ದೂರು ನೀಡಲಾಗಿದೆ.

Read More
Next Story