FIR Filed Against Municipal Officer for Babri Masjid Demolition Video WhatsApp Status
x

ಬಾಬರಿ ಮಸೀದಿ

ಬಾಬರಿ ಮಸೀದಿ ಧ್ವಂಸದ ವಾಟ್ಸ್‌ಆ್ಯಪ್ ಸ್ಟೇಟಸ್; ಪಾಲಿಕೆ ಅಧಿಕಾರಿ ವಿರುದ್ಧ ಎಫ್‌ಐಆರ್

ಅಂಬಾದಾಸ್ ಅವರು ಬಾಬರಿ ಮಸೀದಿ ಧ್ವಂಸದ ದೃಶ್ಯಗಳಿರುವ ವೀಡಿಯೊಗೆ ‘ಬನಾಯೆಂಗೆ ಮಂದಿರ’ ಎಂಬ ಹಾಡನ್ನು ಸೇರಿಸಿ ತಮ್ಮ ಮೊಬೈಲ್‌ನಲ್ಲಿ ವಾಟ್ಸ್‌ಆ್ಯಪ್ ಸ್ಟೇಟಸ್ ಹಾಕಿಕೊಂಡಿದ್ದರು ಎಂದು ಆರೋಪಿಸಲಾಗಿದೆ.


Click the Play button to hear this message in audio format

ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದ ವೀಡಿಯೊವನ್ನು ವಾಟ್ಸ್‌ಆ್ಯಪ್ ಸ್ಟೇಟಸ್ ಹಾಕಿಕೊಂಡಿದ್ದ ಆರೋಪದ ಮೇಲೆ ಕಲಬುರಗಿ ಮಹಾನಗರ ಪಾಲಿಕೆಯ ಕಚೇರಿ ವ್ಯವಸ್ಥಾಪಕ ಅಂಬಾದಾಸ್ ಎಂಬುವವರ ವಿರುದ್ಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.

ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಅಂಬಾದಾಸ್ ಅವರು ಬಾಬರಿ ಮಸೀದಿ ಧ್ವಂಸದ ದೃಶ್ಯಗಳಿರುವ ವೀಡಿಯೊಗೆ ‘ಬನಾಯೆಂಗೆ ಮಂದಿರ’ ಎಂಬ ಹಾಡನ್ನು ಸೇರಿಸಿ ತಮ್ಮ ಮೊಬೈಲ್‌ನಲ್ಲಿ ವಾಟ್ಸ್‌ಆ್ಯಪ್ ಸ್ಟೇಟಸ್ ಹಾಕಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಮುದಾಯದ ಮುಖಂಡರಾದ ಅಜಮಲ್ ಗೋಲಾ ಅವರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

ದೂರಿನನ್ವಯ ಅಂಬಾದಾಸ್ ವಿರುದ್ಧ ಬ್ರಹ್ಮಪುರ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಕೋಮು ಸಾಮರಸ್ಯ ಕದಡುವ ಮತ್ತು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Read More
Next Story