Shootout | ರಿಕ್ಕಿ ರೈ ಮೇಲೆ ಗುಂಡಿನ ದಾಳಿ ; ಮುತ್ತಪ್ಪ ರೈ ಎರಡನೇ ಪತ್ನಿ ಸೇರಿ  ನಾಲ್ವರ ವಿರುದ್ಧ FIR ದಾಖಲು
x

ರಿಕ್ಕಿ ರೈ ಮೇಲೆ ಫೈರಿಂಗ್​ ನಡೆದಿದೆ. 

Shootout | ರಿಕ್ಕಿ ರೈ ಮೇಲೆ ಗುಂಡಿನ ದಾಳಿ ; ಮುತ್ತಪ್ಪ ರೈ ಎರಡನೇ ಪತ್ನಿ ಸೇರಿ ನಾಲ್ವರ ವಿರುದ್ಧ FIR ದಾಖಲು

ಕಾರು ಚಾಲಕ ಬಸವರಾಜ್​​ ದೂರು ಆಧರಿಸಿ A1 ರಾಕೇಶ್ ಮಲ್ಲಿ, A2 ಅನುರಾಧಾ, A3 ನಿತೇಶ್ ಶೆಟ್ಟಿ ಹಾಗೂ A4 ವೈದ್ಯನಾಥನ್ ವಿರುದ್ಧ ಬಿಎನ್​ಎಸ್ 109,3(5) ಹಾಗೂ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದೆ.


ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ಕಾರು ಚಾಲಕ ಬಸವರಾಜ್​​ ದೂರು ಆಧರಿಸಿ ರಾಕೇಶ್ ಮಲ್ಲಿ, ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ, ನಿತೇಶ್ ಶೆಟ್ಟಿ ಹಾಗೂ ವೈದ್ಯನಾಥನ್ ವಿರುದ್ಧ ಬಿಎನ್​ಎಸ್ 109,3(5) ಹಾಗೂ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದೆ.

ಬಿಡದಿಯಲ್ಲಿರುವ ಮುತ್ತಪ್ಪ ರೈ ಅವರ ನಿವಾಸದ ಕಾಂಪೌಂಡ್ ಬಳಿ ರಾತ್ರಿ 1.30.ರ ಸುಮಾರಿಗೆ ದುಷ್ಕರ್ಮಿಗಳು ರಿಕ್ಕಿ ರೈ ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ರಿಕ್ಕಿ ರೈಗೆ ಗಾಯಗಳಾಗಿದ್ದು, ತಕ್ಷಣವೇ ಬಿಡದಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಕಿ ರೈ ತಮ್ಮ ಫಾರ್ಚೂನ‌ರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ.

ರಿಯಲ್ ಎಸ್ಟೇಟ್ ವಿಚಾರವಾಗಿ ಈ ಹಿಂದೆಯೂ ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಭೂಗತ ಲೋಕದ ಕೈವಾಡ ಇರುವ ಶಂಕೆ ಕೂಡ ವ್ಯಕ್ತವಾಗಿದೆ. ತಂದೆಯ ಮೇಲಿನ ದ್ವೇಷ, ರಿಕ್ಕಿಯ ವೈಯಕ್ತಿಕ ದ್ವೇಷಕ್ಕೆ ಫೈರಿಂಗ್ ನಡೆದಿರುವ ಅನುಮಾನಗಳು ಹುಟ್ಟಿಕೊಂಡಿವೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಮನೆ ಸಿಬ್ಬಂದಿ, ಆಪ್ತರಿಂದ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ರಿಕ್ಕಿ ರೈ ವಿದೇಶದಿಂದ ಬಂದಿದ್ದು ಯಾವಾಗ, ವ್ಯವಹಾರಗಳೇನು? ಇತ್ತೀಚೆಗೆ ಯಾವುದಾದರೂ ವ್ಯವಹಾರದಲ್ಲಿ ಗಲಾಟೆ ಆಗಿತ್ತಾ? ರಾಮನಗರ ತಾಲೂಕಿನ ಬಿಡದಿ ಮನೆಯಲ್ಲಿ ಯಾರ್ಯಾರು ಇದ್ದಾರೆ? ರಿಕ್ಕಿ ಮನೆಗೆ ಹೊಸದಾಗಿ ಯಾರಾದರು ಕೆಲಸಕ್ಕೆ ಸೇರಿಕೊಂಡಿದ್ದರಾ? ಹಳೇ ದ್ವೇಷ, ಅಸ್ತಿ ವಿವಾದ, ವ್ಯವಹಾರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Read More
Next Story