CM Yields to Opposition Pressure: ₹25 Crore Grant Approved for Each Constituency
x

ಸಿಎಂ ಸಿದ್ದರಾಮಯ್ಯ

ಕೃಷ್ಣ- ಭೀಮ ನದಿ ತೀರದಲ್ಲಿ ಪ್ರವಾಹದ ಸ್ಥಿತಿ: ತೀವ್ರ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಿಎಂ ಸೂಚನೆ

ಜಿಲ್ಲಾಧಿಕಾರಿಗಳು ಮತ್ತು ಸಿಇಒ ಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದ್ದಾರೆ.


ಕಲಬುರಗಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾಗೂ ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮ ನದಿ ತೀರ ಹಾಗೂ ಬೆಣ್ಣೆತೊರೆಯಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸುವ ಜತೆಗೆ ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಗುಲ್ಬರ್ಗ, ಬಿಜಾಪುರ ಯಾದಗಿರಿ, ಬೀದರ್ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಿಇಒಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳಿಗೆ ಅಗತ್ಯ ತುರ್ತು ಕ್ರಮ ಕೈಗೊಳ್ಳಲಿ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳು ಮತ್ತು ಸಿಇಒ ಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಬೇಕು. ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು. ಮಾನವ ಮತ್ತು ರಾಸುಗಳ, ಜಾನುವಾರುಗಳ ಪ್ರಾಣ ಹಾನಿ ಆಗದಂತೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಸಂತ್ರಸ್ಥರಿಗೆ ಆಹಾರ ಕೇಂದ್ರಗಳು, ಜಾನುವಾರುಗಳಿಗೆ ಅಗತ್ಯ ಮೇವಿನ‌ ವ್ಯವಸ್ಥೆ ಕಲ್ಪಿಸುವಂತೆ ಸಿಎಂ ಸೂಚಿಸಿದ್ದಾರೆ.

Read More
Next Story