Former Minister H. Anjaneya: Nomadic Tribes Facing Injustice in Internal Reservation; Raised Issue with CM
x
ಮಾಜಿ ಸಚಿವ ಎಚ್. ಆಂಜನೇಯ 

ಒಳ ಮೀಸಲಾತಿಯಲ್ಲಿ ಅಲೆಮಾರಿಗಳಿಗೆ ಅನ್ಯಾಯ: ಸಿಎಂ ಗಮನಕ್ಕೆ ತಂದಿದ್ದೇನೆ ಎಂದ ಮಾಜಿ ಸಚಿವ ಎಚ್. ಆಂಜನೇಯ

ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಆಧರಿಸಿ, ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ನೇತೃತ್ವದ ಏಕಸದಸ್ಯ ಆಯೋಗವು ಅತ್ಯಂತ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿತ್ತು.


ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹಂಚಿಕೆಯಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ಎಚ್. ಆಂಜನೇಯ ಬೇಸರ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿರುವುದಾಗಿ ಅವರು ತಿಳಿಸಿದರು.

ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಆಧರಿಸಿ, ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ನೇತೃತ್ವದ ಏಕಸದಸ್ಯ ಆಯೋಗವು ಅತ್ಯಂತ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿತ್ತು. ಅಲೆಮಾರಿ ಸಮುದಾಯಗಳು ಅತ್ಯಂತ ಹಿಂದುಳಿದಿರುವುದನ್ನು ಗುರುತಿಸಿ, ಅವರಿಗೆ ಪ್ರತ್ಯೇಕವಾಗಿ ಮೀಸಲಾತಿ ನೀಡಬೇಕೆಂದು ಶಿಫಾರಸು ಮಾಡಿತ್ತು.

ಸಂಪುಟ ಸಭೆಯಲ್ಲಿ ಕೆಲವು ಸಚಿವರ ಹಠದಿಂದಾಗಿ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ ನೀಡುವ ಶಿಫಾರಸನ್ನು ಪರಿಗಣಿಸಲಿಲ್ಲ. ಬದಲಾಗಿ, ಅವರನ್ನು ಇತರ ಸಮುದಾಯಗಳೊಂದಿಗೆ ಸೇರಿಸಿ ಮೀಸಲಾತಿ ಹಂಚಿಕೆ ಮಾಡಿರುವುದರಿಂದ ಅನ್ಯಾಯವಾಗಿದೆ ಎಂದು ಆಂಜನೇಯ ಅಸಮಾಧಾನ ವ್ಯಕ್ತಪಡಿಸಿದರು.

Read More
Next Story