ಜೆಡಿಎಸ್‌ ತೊರೆದು ಬಿಜೆಪಿಗೆ ಸೇರಿದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್
x
ಮಾಜಿ ಸಚಿವ ಮನೋಹರ್ ತಹಸೀಲ್ದಾರ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರಿದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್

ಮಾಜಿ ಸಚಿವ ಮನೋಹರ್ ತಹಸೀಲ್ದಾರ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಐದು ದಶಕಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದರು.


Click the Play button to hear this message in audio format

ಬೆಂಗಳೂರು: ಮಾಜಿ ಸಚಿವ ಮನೋಹರ್ ತಹಸೀಲ್ದಾರ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಐದು ದಶಕಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು ಕಳೆದ ಚುನಾವಣೆಯಲ್ಲಿ ಹಾನಗಲ್ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಜೆಡಿಎಸ್‌ ಸೇರಿದ್ದರು. ಇದೀಗ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಅಲ್ಲಿಂದ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಮಾಜಿ ಸಚಿವ ಮನೋಹರ್ ತಹಸೀಲ್ದಾರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹಾಜರಿದ್ದರು.

ಮನೋಹರ್‌ ತಹಸೀಲ್ದಾರ್‌ ಅವರು ರೈತರ ಪರ ನಾಯಕರಾಗಿದ್ದಲ್ಲದೆ, ಸಾಕಷ್ಟು ಜನಪ್ರಿಯತೆಯನ್ನು ಹೊಂದಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವರ್ಚಸ್ಸುಳ್ಳ ನಾಯಕರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ. ಈ ಕಾರಣದಿಂದ ಮನೋಹರ್‌ ತಹಸೀಲ್ದಾರ್‌ ಸೇರ್ಪಡೆ ಹಾವೇರಿ ಬಿಜೆಪಿ ಪಾಲಿಗೆ ಮುಖ್ಯವಾಗಿದೆ.

Read More
Next Story