Manmohan Singh : ಮನಮೋಹನ್ ಸಿಂಗ್ ನಿಧನ ಹಿನ್ನೆಲೆ; ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ರದ್ದು
x
ಮಾಜಿ ಪ್ರಧಾನಿ ಮನಮೋಹನ್ ಸಿಂಗ್

Manmohan Singh : ಮನಮೋಹನ್ ಸಿಂಗ್ ನಿಧನ ಹಿನ್ನೆಲೆ; ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ರದ್ದು

Manmohan Singh: ಮನಮೋಹನ್‌ ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿದ್ದ ಕಾಂಗ್ರೆಸ್‌ ನಾಯಕರು ಬೆಳಗಾವಿಯಿಂಧ ವಿಶೇಷ ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಆರಂಭಿಸಿದ್ದಾರೆ.


ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಾಳೆ (ಡಿ.27) ನಡೆಯಬೇಕಾಗಿದ್ದ ಕಾಂಗ್ರೆಸ್ ಸಮ್ಮೇಳನ ರದ್ದಾಗಿದೆ. ನಾಳೆ ಬೆಳಗಾವಿಯ ಸಿಪಿಇಡಿ ಗ್ರೌಂಡ್​ನಲ್ಲಿ ʼಜೈ ಬಾಪು, ಜೈ ಭೀಮ್, ಜೈ ಸಂವಿಧಾನʼ ಕಾರ್ಯಕ್ರಮವನ್ನು ಕಾಂಗ್ರೆಸ್ ಹಮ್ಮಿಕೊಂಡಿತ್ತು. ಸ್ವಾತಂತ್ರ್ಯಪೂರ್ವದಲ್ಲಿ 1924ರಲ್ಲಿ ನಡೆದಿದ್ದ ಎಐಸಿಸಿ ಅಧಿವೇಶನದ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ಕಾಂಗ್ರೆಸ್ ಸಮ್ಮೇಳನ ಮಹತ್ವ ಪಡೆದುಕೊಂಡಿತ್ತು.

ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿರುವುದರಿಂದ ಬೆಳಗಾವಿಯಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ, ಜೈರಾಮ್ ರಮೇಶ್ ಸೇರಿದಂತೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಬೆಳಗಾವಿಯಿಂದ ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ ನಾಯಕರು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಾಳೆಯ ಕಾರ್ಯಕ್ರಮವನ್ನು ರದ್ದು ಮಾಡಿದ್ದೇವೆ ಎಂದು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಾರೆ.

ಶುಕ್ರವಾರ ಸರ್ಕಾರಿ ರಜೆ

ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ.


Read More
Next Story