Four youths die in head-on collision between car and lorry in Kodagu
x

ಸಾಂದರ್ಭಿಕ ಚಿತ್ರ

ಕೊಡಗಿನಲ್ಲಿ ಕಾರು-ಲಾರಿ ಮುಖಾಮುಖಿ ಡಿಕ್ಕಿ; ನಾಲ್ವರು ಯುವಕರ ಸಾವು

ಯುವಕರು ಉಳ್ಳಾಲದಿಂದ ಮಂಗಳೂರಿಗೆ ಬರುವಾಗ ಅಪಘಾತ ಸಂಭವಿಸಿದ್ದು, ಎದುರಿಗೆ ಬರುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಾರು - ಲಾರಿ ಮುಖಾಮುಖಿ ಡಿಕ್ಕಿ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ಸಂಭವಿಸಿದೆ.

ಕಾರಿನಲ್ಲಿದ್ದ ನಾಲ್ವರು ಯುವಕರನ್ನು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪದ ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಎಂದು ಗುರುತಿಸಲಾಗಿದೆ.

ಲಾರಿ ಕಾರಿಗೆ ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಯುವಕರು ಉಳ್ಳಾಲದಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಎದುರಿಗೆ ಬರುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಮಡಿಕೇರಿ ಪೊಲೀಸರು ಆಗಮಿಸಿ ಪರಿಶೀಲಿಸಿದರು. ಪ್ರಕರಣ ದಾಖಲಾಗಿದೆ.

Read More
Next Story