ಪ್ರತಿಭಟನೆಗೆ ಫ್ರೀಡಂ ಪಾರ್ಕ್‌ ಏಕೈಕ ಸ್ಥಳ;  ಪೊಲೀಸ್‌ ಆಯುಕ್ತರ ಸ್ಪಷ್ಟನೆ
x

ಫ್ರೀಡಂ ಪಾರ್ಕ್‌ 

ಪ್ರತಿಭಟನೆಗೆ ಫ್ರೀಡಂ ಪಾರ್ಕ್‌ ಏಕೈಕ ಸ್ಥಳ; ಪೊಲೀಸ್‌ ಆಯುಕ್ತರ ಸ್ಪಷ್ಟನೆ

2021 ರ ಆದೇಶದ ಹೊರತಾಗಿಯೂ ರಾಜಕೀಯ ಪಕ್ಷಗಳು ಮತ್ತು ಕಾರ್ಯಕರ್ತರು ಫ್ರೀಡಂ ಪಾರ್ಕ್ ಹೊರಗೆ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್‌ ಆಯುಕ್ತರು ಮತ್ತೊಮ್ಮೆ ನಿಗದಿತ ಸ್ಥಳದಲ್ಲೇ ಪ್ರತಿಭಟನೆ ನಡೆಸಲು ಸೂಚಿಸಿದ್ದಾರೆ.


ಸ್ವಾತಂತ್ರ್ಯ ಉದ್ಯಾನವು ಬೆಂಗಳೂರಿನ ಏಕೈಕ ಪ್ರತಿಭಟನಾ ಸ್ಥಳವಾಗಿ ಮುಂದುವರಿಯಲಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನೆಗೆ ಫ್ರೀಡಂ ಪಾರ್ಕ್ ಸಮರ್ಪಕವಾಗಿದೆ. ಅದನ್ನು ಬದಲಾಯಿಸುವ ಯಾವುದೇ ಉದ್ದೇಶವಿಲ್ಲ. ಫ್ರೀಡಂ ಪಾರ್ಕ್‌ನಲ್ಲಿ ಸಮಸ್ಯೆ ಇದ್ದರೆ ಅಥವಾ ಆ ಪ್ರದೇಶವು ಸಾಕಾಗದಿದ್ದರೆ ಮಾತ್ರ ಸ್ಥಳ ಬದಲಾವಣೆ ಬಗ್ಗೆ ಯೋಚಿಸಬಹುದು ಎಂದು ಹೇಳಿದ್ದಾರೆ.

ಅಂಗನವಾಡಿ ಮತ್ತು ರಸ್ತೆ ಸಾರಿಗೆ ನಿಗಮ (ಆರ್‌ಟಿಸಿ) ನೌಕರರು ನಡೆಸಿದ ಪ್ರತಿಭಟನೆಗಳು ಜನರಿಗೆ ಅನಾನುಕೂಲ ಉಂಟು ಮಾಡಿ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದ ಹಿನ್ನೆಲೆಯಲ್ಲಿ ನಗರ ಪೊಲೀಸರು 2021 ರಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದರು. ಅದಕ್ಕೂ ಮುನ್ನ ಟೌನ್ ಹಾಲ್, ಬನಪ್ಪ ಪಾರ್ಕ್ ಮತ್ತು ಮೌರ್ಯ ವೃತ್ತದ ಬಳಿಯೂ ಪ್ರತಿಭಟನೆ ನಡೆಯುತ್ತಿತ್ತು.

ಜನರು ಪರಿಣಾಮಕಾರಿಯಾಗಿ ಪ್ರತಿಭಟಿಸುವ ಹಕ್ಕನ್ನು ಪೊಲೀಸರು ನಿರಾಕರಿಸುತ್ತಿದ್ದಾರೆ. ಪ್ರತಿಭಟನೆಯನ್ನು ಒಂದೇ ಸ್ಥಳಕ್ಕೆ ಸೀಮಿತಗೊಳಿಸಲಾಗುತ್ತಿದೆ ಎಂದು ನಾಗರಿಕ ಸಂಘಟನೆಗಳು ದೂರಿವೆ.

ಇನ್ನು 2021 ರ ಆದೇಶದ ಹೊರತಾಗಿಯೂ ರಾಜಕೀಯ ಪಕ್ಷಗಳು ಮತ್ತು ಕಾರ್ಯಕರ್ತರು ಫ್ರೀಡಂಪಾರ್ಕ್ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರಿಗೆ ಜುಲೈ 5 ರಂದು ಲಾಲ್‌ಬಾಗ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಯಿತು. ಅದೇ ದಿನ, ಶಾಂತಿನಗರದಲ್ಲಿರುವ ಬಿಎಂಆರ್‌ಸಿಎಲ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

Read More
Next Story