Its the job of some people to find fault with my statement: DCM DKshi is upset
x

ಡಿಸಿಎಂ ಡಿ.ಕೆ. ಶಿವಕುಮಾರ್‌

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಈ ಹಿಂದೆ ಸಲ್ಲಿಸಿದ್ದ ಡಿಪಿಆರ್ ತಿರಸ್ಕರಿಸಿದ್ದರು. ಹೀಗಾಗಿ ಅದರಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ ಹೊಸದಾಗಿ ಡಿಪಿಆರ್ ಸಲ್ಲಿಸುತ್ತೇವೆ. ಕಾನೂನು ಪ್ರಕಾರ ಯಾರ ಮುಂದೆ ಮಂಡಿಸಬೇಕೋ ಅವರ ಮುಂದೆ ಮಂಡಿಸುತ್ತೇವೆ ಎಂದರು.


Click the Play button to hear this message in audio format

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಕುರಿತು ಅಧಿಕಾರಿಗಳ ಸಭೆ ಹಾಗೂ ಕಾವೇರಿ ನೀರಾವರಿ ನಿಗಮ ನಿರ್ದೇಶಕರ ಮಂಡಳಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

"ಕಾವೇರಿ ನೀರಾವರಿ ನಿಗಮ ಮಂಡಳಿ ಸಭೆ ಮಾಡಲಾಗಿದೆ. ಇದಕ್ಕೆ ಮೊದಲು, ಮೇಕೆದಾಟು ಯೋಜನೆ ಕುರಿತ ಸುಪ್ರೀಂ ಕೋರ್ಟ್ ತೀರ್ಪು ನಂತರ ಈ ಯೋಜನೆಯನ್ನು ಹೇಗೆ ಮುಂದಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಚರ್ಚೆ ಮಾಡಿದ್ದೇವೆ. ಡಿಪಿಆರ್ ಮರುಸಲ್ಲಿಕೆ ಮಾಡಬೇಕಿದೆ. ಇದರಲ್ಲಿ ಯೋಜನೆ ಸಂಪೂರ್ಣ ವಿವರ, ಎಷ್ಟು ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ ಎಂದು ಮಾಹಿತಿ ನೀಡಬೇಕು. ಮೇಕೆದಾಟು ಯೋಜನೆ ಕಚೇರಿಯನ್ನು ಹಾರೋಬೆಲೆಯಲ್ಲಿ ಆರಂಭಿಸಿದ್ದೇವೆ. ಮಂಡ್ಯಕ್ಕೆ ಹತ್ತಿರವಾಗುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಸಿಇ, ಸಿಸಿಎಫ್ ಅವರನ್ನೊಳಗೊಂಡ ಪ್ರತ್ಯೇಕ ಕಚೇರಿ ಆರಂಭಿಸಲು ತೀರ್ಮಾನಿಸಿದ್ದೇವೆ. ಇದಕ್ಕೆ ಅಗತ್ಯ ಸಿಬ್ಬಂದಿ ಒದಗಿಸಲು ತಯಾರು ಮಾಡಲಾಗುವುದು" ಎಂದು ತಿಳಿಸಿದರು.

ಮತ್ತೆ ಹೊಸದಾಗಿ ಡಿಪಿಆರ್ ಮಾಡಬೇಕೇ, ಇದನ್ನು ಜಲ ಆಯೋಗದ ಮುಂದೆ ಮಂಡಿಸುವಿರಾ ಅಥವಾ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮಂಡಿಸುತ್ತೀರಾ ಎಂದು ಕೇಳಿದಾಗ, "ಈ ಹಿಂದೆ ಸಲ್ಲಿಸಿದ್ದ ಡಿಪಿಆರ್ ತಿರಸ್ಕರಿಸಿದ್ದರು. ಹೀಗಾಗಿ ಅದರಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ ಹೊಸದಾಗಿ ಡಿಪಿಆರ್ ಸಲ್ಲಿಸುತ್ತೇವೆ. ಕಾನೂನು ಪ್ರಕಾರ ಯಾರ ಮುಂದೆ ಮಂಡಿಸಬೇಕೋ ಅವರ ಮುಂದೆ ಮಂಡಿಸುತ್ತೇವೆ" ಎಂದರು.

ಮತ್ತೆ ದೆಹಲಿಗೆ ಪ್ರಯಾಣ ಬೆಳೆಸುವಿರಾ ಎಂದು ಕೇಳಿದಾಗ, "ಸದ್ಯಕ್ಕೆ ದೆಹಲಿಗೆ ಹೋಗುವ ಯಾವ ಆಲೋಚನೆಯೂ ಇಲ್ಲ" ಎಂದು ತಿಳಿಸಿದರು.

Read More
Next Story