Gang-Rape| ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
Gang-Rape| ಯುವತಿಯನ್ನು ಕಾರಿಗೆ ಹತ್ತಿಸಿಕೊಂಡ ಯುವಕರು ಕೆ.ಆರ್. ಮಾರುಕಟ್ಟೆ ಮೂಲಕ ಬೇರೊಂದು ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿರುವುದಾಗಿ ಯುವತಿ ಆರೋಪಿಸಿದ್ದಾಳೆ.
ಇಬ್ಬರು ದುಷ್ಕರ್ಮಿಗಳು ಸೇರಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಬಳಿಕ ಮಹಿಳೆಯ ಮೊಬೈಲ್, ಹಣ, ತಾಳಿ, ಚಿನ್ನದ ಸರ ದರೋಡೆ ಮಾಡಿ ಪರಾರಿಯಾಗಿದ್ದಾರೆ ಘಟನೆ ಬೆಂಗಳೂರಿನ ಕೆಆರ್ ಮಾರ್ಕೆಟ್ ಬಳಿ ಭಾನುವಾರ ರಾತ್ರಿ ನಡೆದಿದೆ.
ಈ ಬಗ್ಗೆ ಯುವತಿ ಎಸ್. ಜೆ. ಪಾರ್ಕ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ದುಷ್ಕರ್ಮಿಗಳನ್ನು ಹಿಡಿಯಲು ಪೊಲೀಸ್ ತಂಡ ರಚನೆ ಮಾಡಲಾಗಿದೆ. ಎರಡು ಪೊಲೀಸ್ ತಂಡ ರಚನೆ ಮಾಡಿ ಶೋಧ ಕಾರ್ಯ ಶುರು ಮಾಡಿದ್ದಾರೆ. ಭಾನುವಾರ ರಾತ್ರಿ 11.30ರಿಂದ 1 ಗಂಟೆಯೊಳಗೆ ಈ ಕೃತ್ಯ ಜರುಗಿದೆ ಎನ್ನಲಾಗಿದೆ.
ಘಟನೆ ಏನು?
ಭಾನುವಾರ ರಾತ್ರಿ 11.30 ರ ಸುಮಾರಿಗೆ ತಮಿಳುನಾಡು ಮೂಲದ ಮಹಿಳೆ ಯಲಹಂಕಕ್ಕೆ ತೆರಳಲು ಕೆಆರ್ ಮಾರ್ಕೆಟ್ ಬಳಿ ಬಸ್ಗಾಗಿ ಕಾಯುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಇಬ್ಬರು ಯುವಕರು ಯುವತಿ ಬಳಿ ಎಲ್ಲಿಗೆ ಹೋಗಬೇಕು, ಡ್ರಾಪ್ ಏನಾದ್ರೂ ಬೇಕಾ ಎಂದು ಕೇಳಿದ್ದರಂತೆ. ಈ ವೇಳೆ ಯುವತಿ ಡ್ರಾಪ್ ಬೇಡ, ಬಸ್ ನಿಲ್ದಾಣ ಎಲ್ಲಿದೆ ಎಂದು ಕೇಳಿದ್ದಳಂತೆ, ಈ ವೇಳೆ ಬಸ್ ಸ್ಟ್ಯಾಂಡ್ಗೆ ಬಿಡುತ್ತೇವೆ ಬನ್ನಿ ಎಂದು ಕಾರಿನಲ್ಲಿ ಹತ್ತಿಸಿಕೊಂಡರು ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಯುವತಿಯನ್ನು ಕಾರಿಗೆ ಹತ್ತಿಸಿಕೊಂಡ ಯುವಕರು ಮಾರುಕಟ್ಟೆ ಮೂಲಕ ಬೇರೊಂದು ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿರುವುದಾಗಿ ಯುವತಿ ಆರೋಪಿಸಿದ್ದಾಳೆ. ದೂರಿನ ಅನ್ವಯ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಘಟನೆ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಪರಿಶೀಲನೆಗೆ ಮುಂದಾಗಿದ್ದಾರೆ. ಘಟನೆ ನಡೆದ ಸ್ಥಳದ ಸಿಸಿಟಿವಿಗಳ ಪರಿಶೀಲನೆಗೆ ಪೊಲೀಸರು ಮುಂದಾಗಿದ್ದಾರೆ.