ರೇಷ್ಮೆ ಮಂಡಳಿ ನೂತನ ಅಧ್ಯಕ್ಷರಾಗಿ ಗಂಗಾಧರ್‌ ನೇಮಕ
x

ರೇಷ್ಮೆ ಮಂಡಳಿ ನೂತನ ಅಧ್ಯಕ್ಷರಾಗಿ ಗಂಗಾಧರ್‌ ನೇಮಕ

ಚನ್ನಪಟ್ಟಣ ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಸೋಗಾಲ ಮೂಲದ ಗಂಗಾಧರ್ ಅವರು ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪಡೆದಿದ್ದು, ರಾಜಕೀಯದ ಜೊತೆಗೆ ಉದ್ಯಮ ವಲಯದಲ್ಲೂ ಸಕ್ರಿಯರಾಗಿದ್ದಾರೆ.


ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತದ (ಕೆಎಸ್‌ಐಸಿ) ನೂತನ ಅಧ್ಯಕ್ಷರನ್ನಾಗಿ ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಎಸ್. ಗಂಗಾಧರ್ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.

ಚನ್ನಪಟ್ಟಣ ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಸೋಗಾಲ ಮೂಲದ ಗಂಗಾಧರ್ ಅವರು ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪಡೆದಿದ್ದು, ರಾಜಕೀಯದ ಜೊತೆಗೆ ಉದ್ಯಮ ವಲಯದಲ್ಲೂ ಸಕ್ರಿಯರಾಗಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ಗಂಗಾಧರ್ ಅವರು ಅಕ್ಕೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯರಾಗಿ ಹಾಗೂ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿದ ಅವರು ಸೋತಿದ್ದರು. ಪ್ರಸ್ತುತ ಅಂಬಿಗರ ಚೌಡಯ್ಯ ಮಹಾಸಭೆಯ ಉಪಾಧ್ಯಕ್ಷರಾಗಿರುವ ಗಂಗಾಧರ್, ಬೆಂಗಳೂರಿನ ಕ್ರಿಯೇಟಿವ್ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿಯ ಸಂಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಇದೇ ವೇಳೆ, ಅವರು ಕೆಂಗೇರಿ ಉಪನಗರದ ರೋಟರಿ ಸೇವಾ ಟ್ರಸ್ಟ್‌ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದು, ಎಫ್‌ಕೆಸಿಸಿ ಹಾಗೂ ಬೆಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಷನ್‌ನ ಸದಸ್ಯರಾಗಿದ್ದಾರೆ. ರೋಟರಿ ಕ್ಲಬ್‌ನಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಗಂಗಾಧರ್, ಸಾಮಾಜಿಕ ಚಟುವಟಿಕೆಗಳಲ್ಲಿಯೂ ಸಕ್ರಿಯ ಪಾತ್ರ ವಹಿಸಿದ್ದಾರೆ.

Read More
Next Story