
ಸಾಂದರ್ಭಿಕ ಚಿತ್ರ
ಎಸ್‌ಎಸ್‌ಎಲ್‌ಸಿ ಪಾಸ್ ಆದವರಿಗೆ ಸುವರ್ಣಾವಕಾಶ| ಸೈನಿಕ ಶಾಲೆಯಲ್ಲಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
18ರಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, 500 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19,900 ರೂ. ನಿಂದ 63,200 ರೂಪಾಯಿವರೆಗೆ ಸಂಬಳ ನಿಗದಿಪಡಿಸಲಾಗಿದೆ.
ವಿಜಯಪುರದಲ್ಲಿರುವ ಸೈನಿಕ ಶಾಲೆಯಲ್ಲಿ ಖಾಲಿ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ವಿಜಯಪುರದ ಸೈನಿಕ ಶಾಲೆಯಲ್ಲಿ ಲೋವರ್ ಡಿವಿಷನ್ ಕ್ಲರ್ಕ್ ಎರಡು ಗುದ್ದೆಗಳು ಖಾಲಿ ಇದ್ದು, ಆಫ್‌ಲೈನ್ ಮೂಲಕ ಅರ್ಜಿಸಲ್ಲಿಸಲು ಆ.17 ಕೊನೆಯ ದಿನಾಂಕವಾಗಿದೆ.
ವಿದ್ಯಾರ್ಹತೆ ಮತ್ತು ವಯೋಮಿತಿ
ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪಾಸಾದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 18ರಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, 500 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19,900 ರೂ. ನಿಂದ 63,200 ರೂಪಾಯಿವರೆಗೆ ಸಂಬಳ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
1. ಸೈನಿಕ ಶಾಲೆಯ ಅಧಿಕೃತ ವೆಬ್ ಸೈಟ್ https://ssbj.in/ ಗೆ ಭೇಟಿ ನೀಡಬೇಕು
2. Sainik School Bijapur ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
3. ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು.
4. ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
5. ಸಲ್ಲಿಕೆ ಮಾಡಲಾದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಗಳೊಂದಿಗೆ ಪ್ರಾಂಶುಪಾಲರು, ಸೈನಿಕ ಶಾಲೆ, ವಿಜಯಪುರ 586108 ವಿಳಾಸಕ್ಕೆ ಅಂಚೆ ಮೂಲಕ ಕೊನೆಯ ದಿನಾಂಕದೊಳಗೆ ಕಳುಹಿಸಬಹುದಾಗಿದೆ. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.